T20 World Cup 2026, India vs Zimbabwe: ಭಾರತ ತಂಡವು ಸೆಮಿಫೈನಲ್ ರೇಸ್ನಲ್ಲಿ ಉಳಿಯಬೇಕಿದ್ದರೆ ನಾಳೆ (ಫೆ.26) ನಡೆಯಲಿರುವ ಝಿಂಬಾಬ್ವೆ ವಿರುದ್ಧದ ಪಂದ್ಯದಲ್ಲಿ ಜಯಗಳಿಸುವುದು ಅನಿವಾರ್ಯ. ಸೂಪರ್-8 ಸುತ್ತಿನ ನಿರ್ಣಾಯಕ ಪಂದ್ಯಕ್ಕಾಗಿ ಟೀಮ್ ಇಂಡಿಯಾದ ಆಡುವ ಬಳಗದಲ್ಲಿ ಮಹತ್ವದ ಬದಲಾವಣೆ ಮಾಡುವ ಸಾಧ್ಯತೆಯಿದೆ.

T20 World Cup 2026: ಟಿ20 ವಿಶ್ವಕಪ್ನ 48ನೇ ಪಂದ್ಯದಲ್ಲಿ ಭಾರತ ಮತ್ತು ಝಿಂಬಾಬ್ವೆ ತಂಡಗಳು ಮುಖಾಮುಖಿಯಾಗಲಿದೆ. ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಾಳೆ (ಫೆ.26) ನಡೆಯಲಿರುವ ಈ ಪಂದ್ಯಕ್ಕಾಗಿ ಟೀಮ್ ಇಂಡಿಯಾ ಪ್ಲೇಯಿಂಗ್ ಇಲೆವೆನ್ನಲ್ಲಿ ಮಹತ್ವದ ಬದಲಾವಣೆ ಕಂಡು ಬರುವ ಸಾಧ್ಯತೆಯಿದೆ. ಏಕೆಂದರೆ ಸೌತ್ ಆಫ್ರಿಕಾ ವಿರುದ್ಧದ ಪಂದ್ಯದಲ್ಲಿ ಟೀಮ್ ಇಂಡಿಯಾ ಬ್ಯಾಟರ್ಗಳು ಕಳಪೆ ಪ್ರದರ್ಶನ ನೀಡಿದ್ದರು. ಹೀಗಾಗಿ ಈ ನಿರ್ಣಾಯಕ ಪಂದ್ಯಕ್ಕಾಗಿ ಟೀಮ್ ಇಂಡಿಯಾ ತನ್ನ ಬ್ಯಾಟಿಂಗ್ ಲೈನಪ್ನಲ್ಲಿ ಬದಲಾವಣೆ ಮಾಡಿಕೊಳ್ಳಬಹುದು.
ಅದರಂತೆ ಝಿಂಬಾಬ್ವೆ ವಿರುದ್ಧ ಆರಂಭಿಕರಾಗಿ ಅಭಿಷೇಕ್ ಶರ್ಮಾ ಹಾಗೂ ಸಂಜು ಸ್ಯಾಮ್ಸನ್ ಕಣಕ್ಕಿಳಿಯಬಹುದು. ಇನ್ನು ತಿಲಕ್ ವರ್ಮಾ ಬದಲಿಗೆ ಇಶಾನ್ ಕಿಶನ್ನ ಮೂರನೇ ಕ್ರಮಾಂಕದಲ್ಲಿ ಆಡಿಸುವ ಸಾಧ್ಯತೆಯಿದೆ. ಇನ್ನು ನಾಲ್ಕನೇ ಕ್ರಮಾಂಕದಲ್ಲಿ ಸೂರ್ಯಕುಮಾರ್ ಯಾದವ್ ಕಣಕ್ಕಿಳಿಯಬಹುದು.
ಆಲ್ರೌಂಡರ್ಗಳಾಗಿ ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ವಾಷಿಂಗ್ಟನ್ ಸುಂದರ್ ಕಣಕ್ಕಿಳಿಯುವುದನ್ನು ಎದುರು ನೋಡಬಹುದು. ಇನ್ನು ವೈಯುಕ್ತಿಕ ಕಾರಣಗಳಿಂದಾಗಿ ಮನೆಗೆ ತೆರಳಿರುವ ರಿಂಕು ಸಿಂಗ್ ಈ ಪಂದ್ಯಕ್ಕೆ ಅಲಭ್ಯರಾಗಲಿದ್ದಾರೆ ಎಂದು ವರದಿಯಾಗಿದೆ. ಹೀಗಾಗಿ ಅವರ ಸ್ಥಾನದಲ್ಲಿ ಅಕ್ಷರ್ ಪಟೇಲ್ಗೆ ಅವಕಾಶ ಸಿಗಬಹುದು.
ಇನ್ನುಳಿದಂತೆ ಬೌಲರ್ಗಳಾಗಿ ಅರ್ಷದೀಪ್ ಸಿಂಗ್, ಜಸ್ಪ್ರೀತ್ ಬುಮ್ರಾ ಹಾಗೂ ವರುಣ್ ಚಕ್ರವರ್ತಿ ಟೀಮ್ ಇಂಡಿಯಾ ಪ್ಲೇಯಿಂಗ್ ಇಲೆವೆನ್ನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಅದರಂತೆ ಟೀಮ್ ಇಂಡಿಯಾದ ಸಂಭಾವ್ಯ ಪ್ಲೇಯಿಂಗ್ ಇಲೆವೆನ್ ಈ ಕೆಳಗಿನಂತಿರಲಿದೆ…
- ಅಭಿಷೇಕ್ ಶರ್ಮಾ
- ಸಂಜು ಸ್ಯಾಮ್ಸನ್
- ಇಶಾನ್ ಕಿಶನ್
- ಸೂರ್ಯಕುಮಾರ್ ಯಾದವ್
- ಹಾರ್ದಿಕ್ ಪಾಂಡ್ಯ
- ಶಿವಂ ದುಬೆ
- ವಾಷಿಂಗ್ಟನ್ ಸುಂದರ್
- ಅಕ್ಷರ್ ಪಟೇಲ್
- ಜಸ್ಪ್ರೀತ್ ಬುಮ್ರಾ
- ಅರ್ಷದೀಪ್ ಸಿಂಗ್
- ವರುಣ್ ಚಕ್ರವರ್ತಿ
ಚೆನ್ನೈ ಪಿಚ್ನಲ್ಲಿ ಆರಂಭದಲ್ಲಿ ವೇಗದ ಬೌಲರ್‌ಗಳಿಗೆ ಸ್ವಲ್ಪ ಸ್ವಿಂಗ್ ದೊರೆತರೂ, ಪಂದ್ಯ ಮುಂದುವರಿದಂತೆ ಸ್ಪಿನ್ನರ್‌ಗಳು ಪ್ರಮುಖ ಪಾತ್ರ ವಹಿಸುತ್ತಾರೆ. ಹೀಗಾಗಿ ಟೀಮ್ ಇಂಡಿಯಾ ಮೂವರು ಸ್ಪಿನ್ನರ್ಗಳೊಂದಿಗೆ ರಣತಂತ್ರ ರೂಪಿಸುವ ಸಾಧ್ಯತೆಯಿದೆ.
ಅದರಂತೆ ಟೀಮ್ ಇಂಡಿಯಾ ಪರ ಸ್ಪಿನ್ನರ್ ಆಗಿ ವರುಣ್ ಚಕ್ರವರ್ತಿ ಕಣಕ್ಕಿಳಿಯುವುದು ಖಚಿತ. ಅವರೊಂದಿಗೆ ಸ್ಪಿನ್ ಆಲ್ರೌಂಡರ್ಗಳಾಗಿ ಅಕ್ಷರ್ ಪಟೇಲ್ ಹಾಗೂ ವಾಷಿಂಗ್ಟನ್ ಸುಂದರ್ಗೆ ಚಾನ್ಸ್ ನೀಡುವ ಸಾಧ್ಯತೆಯಿದೆ. ಈ ಮೂಲಕ ಮೂವರು ಸ್ಪಿನ್ನರ್ಗಳೊಂದಿಗೆ ಟೀಮ್ ಇಂಡಿಯಾ ಝಿಂಬಾಬ್ವೆ ತಂಡವನ್ನು ಅಲ್ಪ ಮೊತ್ತಕ್ಕೆ ಕಟ್ಟಿಹಾಕಲು ಪ್ಲ್ಯಾನ್ ರೂಪಿಸಬಹುದು.
ಇದನ್ನೂ ಓದಿ: ಇಂಗ್ಲೆಂಡ್ಗೆ ಜಯ… ಭಾರತ vs ಪಾಕಿಸ್ತಾನ್ ‘ಸೆಮಿ’ ಮುಖಾಮಖಿ ಇಲ್ಲ!
ಭಾರತ ತಂಡ: ಸೂರ್ಯಕುಮಾರ್ ಯಾದವ್ (ನಾಯಕ), ಅಕ್ಷರ್ ಪಟೇಲ್ (ಉಪನಾಯಕ), ಅಭಿಷೇಕ್ ಶರ್ಮಾ, ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಜಸ್ಪ್ರೀತ್ ಬುಮ್ರಾ, ಅರ್ಷದೀಪ್ ಸಿಂಗ್, ವರುಣ್ ಚಕ್ರವರ್ತಿ, ಮೊಹಮ್ಮದ್ ಸಿರಾಜ್, ವಾಷಿಂಗ್ಟನ್ ಸುಂದರ್, ಕುಲ್ದೀಪ್ ಯಾದವ್, ಇಶಾನ್ ಕಿಶನ್ (ವಿಕೆಟ್ ಕೀಪರ್), ರಿಂಕು ಸಿಂಗ್.






Be the first to comment
Leave a Reply