ವಿಧಾನಸೌಧದ ಸಚಿವರ ಕಚೇರಿಯಲ್ಲಿ ನಗದು, ಚಿನ್ನಾಭರಣ ಕಳ್ಳತನ!

ವಿಧಾನಸೌಧ

ಬೆಂಗಳೂರು: ವಿಧಾನಸೌಧದಲ್ಲೇ ಕಳ್ಳತನ ನಡೆದಿರುವ ಘಟನೆ ಬೆಳಕಿಗೆ ಬಂದಿದೆ. ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ಅವರ ಕಚೇರಿಯಲ್ಲಿ 300 ಗ್ರಾಂ ಚಿನ್ನಾಭರಣ ಹಾಗೂ 1.50 ಲಕ್ಷ ರೂಪಾಯಿ ನಗದು ಇದ್ದ ಬ್ಯಾಗ್​​​ ಕಳವಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಡಿ ಗ್ರೂಪ್ ನೌಕರನನ್ನ ವಿಧಾನಸೌಧ ಪೊಲೀಸರು ಬಂಧಿಸಿದ್ದಾರೆ. ನವೀನ್ ಎಂಬುವರು ಕೆಲಸದ ನಿಮಿತ್ತ ಸಚಿವ ಭೈರತಿ ಸುರೇಶ್ ಅವರ ಕಚೇರಿಗೆ ಬಂದಿದ್ದ ವೇಳೆ, ಬ್ಯಾಗ್​ನಲ್ಲಿದ್ದ 300 ಗ್ರಾಂ ಚಿನ್ನಾಭರಣ ಹಾಗೂ 1.50 ಲಕ್ಷ ನಗದು ಸಹಿತ ಕಚೇರಿಯಲ್ಲೇ ಮರೆತು ಹೊರಟಿದ್ದರು. ಮಾರನೇ ದಿನ ಕಚೇರಿಗೆ ಬಂದು ಪರಿಶೀಲಿಸಿದಾಗ ನಾಪತ್ತೆಯಾಗಿರುವುದು ಗಮನಕ್ಕೆ ಬಂದಿದೆ. ಗಾಬರಿಗೊಂಡ ನವೀನ್ ತಕ್ಷಣ ವಿಧಾನಸೌಧ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದರು. ಕಚೇರಿಯ ಸಿಸಿಟಿವಿ ದೃಶ್ಯ ಪರಿಶೀಲಿಸಿದ ವೇಳೆ, ಡಿಪಿಎಆರ್ ಇಲಾಖೆಯ ಡಿ ಗ್ರೂಪ್ ನೌಕರನೊಬ್ಬ ಬ್ಯಾಗ್​​ ಹೊತ್ತುಕೊಂಡು ಹೋಗಿರುವುದು ಪತ್ತೆಯಾಗಿದೆ. ವಿಧಾನಸೌಧ ಪೊಲೀಸರು ಆರೋಪಿ ಡಿ ಗ್ರೂಪ್ ನೌಕರನನ್ನು ಬಂಧಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚಿನ ವಿಚಾರಣೆ ನಡೆಯುತ್ತಿದ್ದು, ಭದ್ರತಾ ವ್ಯವಸ್ಥೆಗಳ ಕುರಿತು ಸಹ ಪ್ರಶ್ನೆಗಳು ಎದ್ದಿವೆ.

Be the first to comment

Leave a Reply

Your email address will not be published. Required fields are marked *

ad image