
ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ 19 ವರ್ಷದ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿರುವ ಆರೋಪ ಕೇಳಿ ಬಂದಿದೆ. ಈ ಸಂಬಂಧ ಅಮೃತಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸ್ನೇಹಿತರಿಂದಲೇ ಯುವತಿ ಮೇಲೆ ದೌರ್ಜನ್ಯ ನಡೆದಿದೆ. ಬನ್ನೇರುಘಟ್ಟ ಖಾಸಗಿ ಕಾಲೇಜು ವಿದ್ಯಾರ್ಥಿನಿಯಾಗಿರುವ ಸಂತ್ರಸ್ತೆ, ಪಶ್ಚಿಮ ಬಂಗಾಳ ಮೂಲದ ಡಿಕ್ಸಿನ್ ಎಂಬಾತನನ್ನು ಪ್ರೀತಿಸುತ್ತಿದ್ದಳು. ಇತ್ತೀಚೆಗೆ ಡಿಕ್ಸಿನ್ ಮತ್ತು ಮತ್ತೋರ್ವ ಗೆಳೆಯ ನಿಖಿಲ್ ಎಂಬಾತನೊಂದಿಗೆ ಸಂತ್ರಸ್ತೆ ವಿಲ್ಲಾಗೆ ತೆರಳಿದ್ದಳು. ಈ ವೇಳೆ ಯುವತಿಗೆ ನಶೆ ಮತ್ತು ಮಾದಕ ಮಾತ್ರೆಗಳನ್ನು ನೀಡಿ ಡಿಕ್ಸಿನ್ ಮತ್ತು ನಿಖಿಲ್ ಅತ್ಯಾಚಾರಗೈದು ಹಲ್ಲೆ ನಡೆಸಿದ್ದಾರೆ. ಪ್ರೀತಿಯ ಹೆಸರಲ್ಲಿ ಇಬ್ಬರಿಂದ ಅತ್ಯಾಚಾರ ನಡೆದಿದೆ ಎಂಬ ಗಂಭೀರ ಆರೋಪವನ್ನು ಯುವತಿ ಮಾಡಿದ್ದಾಳೆ. ಸಂತ್ರಸ್ತೆ ನೀಡಿದ ದೂರಿನ ಅನ್ವಯ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಆರೋಪಿ ನಿಖಿಲ್ ಹಾಸನ ಜಿಲ್ಲೆಯ ಸಕಲೇಶಪುರ ಮೂಲದವನು ಎಂದು ತಿಳಿದು ಬಂದಿದೆ.






Be the first to comment
Leave a Reply