ಮಾಜಿ ಸಿಎಂ ಬೊಮ್ಮಾಯಿ ಪರ್ಸನಲ್ ಸೆಕ್ರೆಟರಿ ಮಗ ಆತ್ಮಹತ್ಯೆ

ಮಾಜಿ ಸಿಎಂ ಬೊಮ್ಮಾಯಿ ಪರ್ಸನಲ್ ಸೆಕ್ರೆಟರಿ ಮಗ ಆತ್ಮಹತ್ಯೆ

ಬೆಂಗಳೂರು: ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಅವರ ಆಪ್ತ ಕಾರ್ಯದರ್ಶಿ ಚಂದ್ರು ಅವರ ಪುತ್ರ ಹೇಮಂತ್ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ತಂಗಿಗೆ ಆಭರಣ ಕೊಡಿಸಿದ್ದಕ್ಕೆ ತಾಯಿಯೊಂದಿಗೆ ಜಗಳವಾಡಿದ್ದ ಹೇಮಂತ್, ತಿರುಪತಿಗೆ ತೆರಳುವ ಸಿದ್ಧತೆಯಲ್ಲಿದ್ದಾಗಲೇ ಈ ದುರಂತ ಘಟನೆ ನಡೆದಿದೆ. ಶುಕ್ರವಾರ ಹೇಮಂತ್‌ನ ತಂಗಿಗೆ ಆಭರಣ ಕೊಡಿಸಲಾಗಿತ್ತು. ಈ ಸಂಬಂಧ ತಾಯಿ ಜೊತೆ ಹೇಮಂತ್ ಜಗಳ ಮಾಡಿಕೊಂಡಿದ್ದನು. ತಂಗಿಗೆ ಕೇಳಿದ್ದೆಲ್ಲಾ ಕೊಡ್ತೀರಿ, ನನಗೇನೂ ಕೊಡಿಸಲ್ಲ ಎಂದು ಕೋಪದಲ್ಲಿ ಕೋಣೆಗೆ ಹೋಗಿದ್ದ ಹೇಮಂತ್ ಬಾಗಿಲು ಹಾಕಿಕೊಂಡಿದ್ದನು. ರಾತ್ರಿ ಊಟಕ್ಕೂ ಕರೆದ್ರೂ ಹೇಮಂತ್ ಕೋಣೆಯಿಂದ ಹೊರಗೆ ಬಂದಿರಲಿಲ್ಲ.

ರಾತ್ರಿ ಸುಮಾರು 8 ಗಂಟೆವರೆಗೂ ಸ್ನೇಹಿತರೊಂದಿಗೆ ಮೊಬೈಲ್‌ನಲ್ಲಿ ಮಾತನಾಡಿದ್ದಾನೆ. ನಂತರ ಮೊಬೈಲ್ ಸ್ವಿಚ್ಛ್ ಆಫ್ ಮಾಡಿಕೊಂಡಿದ್ದಾನೆ. ರಾತ್ರಿ ಊಟಕ್ಕೆ ಎಷ್ಟೇ ಕರೆದ್ರೂ ಹೇಮಂತ್ ಕೋಣೆಯಿಂದ ಹೊರಗೆ ಬಂದಿರಲಿಲ್ಲ. ರಾತ್ರಿ ಸುಮಾರು 12 ಗಂಟೆಗೆ ಹೇಮಂತ್ ನೇಣು ಬಿಗಿದುಕೊಂಡಿರುವ ಸಾಧ್ಯತೆಗಳಿವೆ. ತಿರುಪತಿಗೆ ತೆರಳಲು ಸಿದ್ಧತೆ ಮಾಡಿಕೊಂಡಿದ್ರೆ ಮನೆಗೆ ಸಂಬಂಧಿಕರು ಸಹ ಆಗಮಿಸಿದ್ದರು.

ಘಟನಾ ಸ್ಥಳಕ್ಕೆ ಸಂಜಯನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಶವವನ್ನು ಮರಣೋತ್ತರ ಶವಪರೀಕ್ಷೆಗಾಗಿ ರಾಮಯ್ಯ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ಮೃತ ಹೇಮಂತ್ ರಾಮಯ್ಯ ಕಾಲೇಜಿನಲ್ಲಿ ಡಿಪ್ಲೋಮಾ ಓದುತ್ತಿದ್ದನು. ಡಿಪ್ಲೋಮಾ ಅಂತಿಮ ವರ್ಷದ ವಿದ್ಯಾರ್ಥಿಯಾಗಿದ್ದ ಹೇಮಂತ್, ಕುಟುಂಬಸ್ಥರೊಂದಿಗೆ ಸಂಜಯನಗರ ಲೊಟ್ಟೆಗೊಲ್ಲಹಳ್ಳಿಯಲ್ಲಿ ವಾಸವಾಗಿದ್ದನು. ಸಂಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Be the first to comment

Leave a Reply

Your email address will not be published. Required fields are marked *

ad image