ಬೆಂಗಳೂರು: ನಾಯಕತ್ವ ಬದಲಾವಣೆ ಹಾಗೂ ಸಿಎಂ ಕುರ್ಚಿ ಕಚ್ಚಾಟದ ನಡುವೆ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರು ಸಾಲು ಸಾಲು ಮಾರ್ಮಿಕ ಪೋಸ್ಟ್ ಮಾಡಿದ್ದು, ಭಾರೀ ಚರ್ಚೆಗೆ ಕಾರಣವಾಗಿದೆ. ಕುರಿ ಕಾಯುತ್ತಿದ್ದವನು ಸಿಎಂ ಆದದ್ದೇ ಪಟ್ಟಭದ್ರರ ಕಣ್ಣು ಕೆಂಪಾಗಲು ಕಾರಣ. ಸಾಮಾಜಿಕ ನ್ಯಾಯಕ್ಕಾಗಿ ನನ್ನ ಉಸಿರುವವರೆಗೂ ಹೋರಾಡುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಸಂದೇಶ ನೀಡಿದ್ದಾರೆ.

ಸಿಎಂ ಸಿದ್ದರಾಮಯ್ಯ ಟ್ವೀಟ್, ಸಾಮಾಜಿಕ ನ್ಯಾಯಕ್ಕಾಗಿ ನನ್ನ ಉಸಿರಿರುವವರೆಗೆ ಹೋರಾಡುತ್ತೇನೆ. ನನ್ನ ನಾಲ್ಕು ದಶಕಗಳ ರಾಜಕೀಯ ಜೀವನ ಎಂದಿಗೂ ಹೂವಿನ ಹಾಸಿಗೆ ಆಗಿರಲಿಲ್ಲ, ಅದು ಕಲ್ಲು – ಮುಳ್ಳುಗಳ ಹಾದಿಯಾಗಿತ್ತು. ನನ್ನನ್ನು ರಾಜಕೀಯವಾಗಿ ಮುಗಿಸಲು ಹಲವಾರು ದೊಡ್ಡ ದೊಡ್ಡ ನಾಯಕರು ಹಲವಾರು ಬಗೆಯ ಕುಟಿಲ ಕಾರಸ್ತಾನಗಳನ್ನು ಮಾಡಿದ್ದಾರೆ. ಅವುಗಳನ್ನೆಲ್ಲವನ್ನೂ ಜನತೆಯ ಆಶೀರ್ವಾದದಿಂದ ಗೆದ್ದು ಬಂದಿದ್ದೇನೆ ಎಂದು ಪೋಸ್ಟ್ನಲ್ಲಿ ಬರೆಯಲಾಗಿದೆ. ಇದು ನನ್ನ ವಿರುದ್ಧ ನಡೆಯುತ್ತಿರುವ ಷಡ್ಯಂತ್ರಗಳಲ್ಲ, ಇದು ನನ್ನನ್ನು ನಂಬಿರುವ, ಪ್ರೀತಿಸುತ್ತಿರುವ, ನನಗೆ ನಿರಂತರವಾಗಿ ಆಶೀರ್ವಾದ ನೀಡಿ ಬೆಂಬಲಿಸುತ್ತಿರುವ ನಿಮ್ಮ ವಿರುದ್ಧ ನಡೆಯುತ್ತಿರುವ ಷಡ್ಯಂತ್ರ ಎನ್ನುವುದು ನನಗೆ ಚೆನ್ನಾಗಿ ಗೊತ್ತು. ಆದ್ದರಿಂದ ನನ್ನ ಉಸಿರು ಇರುವ ವರೆಗೆ ಈ ರಾಜಕೀಯ ಷಡ್ಯಂತ್ರ, ದ್ವೇಷ-ಅಸೂಯೆಯ ರಾಜಕಾರಣದ ವಿರುದ್ಧ ಹೋರಾಡುತ್ತೇನೆ. ಇದು ಸತ್ಯ, ನ್ಯಾಯ ಮತ್ತು ಧರ್ಮಕ್ಕಾಗಿ ನಡೆಯುತ್ತಿರುವ ಹೋರಾಟ. ನಿಮ್ಮೆಲ್ಲರ ಬೆಂಬಲದೊಂದಿಗೆ ಈ ಹೋರಾಟವನ್ನು ನನ್ನ ಉಸಿರು ಇರುವ ವರೆಗೆ ನಡೆಸುತ್ತೇನೆ, ರಣರಂಗವನ್ನು ಬಿಟ್ಟು ಓಡಿ ಹೋಗುವ ಹೇಡಿ ನಾನಾಗಲಾರೆ ಎಂದು ಸಿಎಂ ಬರೆದಿದ್ದಾರೆ. ನನ್ನ ಮೇಲೆ ವಿರೋಧಿಗಳು ನಡೆಸುತ್ತಿರುವ ಬಹುತೇಕ ದಾಳಿಗಳು, ಮಾಡುತ್ತಿರುವ ಟೀಕೆ-ಆರೋಪಗಳಿಗೆ ನಾನು ಹುಟ್ಟಿದ ಜಾತಿಯೂ ಒಂದು ಕಾರಣ.






Be the first to comment
Leave a Reply