ಬೆಂಗಳೂರು ಸುತ್ತಮುತ್ತ ಬೆಳೆಯೋ ತರಕಾರಿಗಳು ವಿಷವಂತೆ!

ಬೆಂಗಳೂರು ಸುತ್ತಮುತ್ತ ಬೆಳೆಯೋ ತರಕಾರಿ ವಿಷವಂತೆ!

ಬೆಂಗಳೂರು: ಸಿಲಿಕಾನ್ ಸಿಟಿ ಸುತ್ತಲಿನ ಪ್ರದೇಶಗಳಲ್ಲಿ ಬೆಳೆಯೋ ತರಕಾರಿಯಲ್ಲಿ ವಿಷಕಾರಿ ಅಂಶ ಪತ್ತೆಯಾಗಿದ್ದು, ಸೇಫ್ ಇಲ್ಲ ಎಂದು ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ದೃಢಪಟ್ಟಿದೆ. ಬೆಂಗಳೂರಿನಲ್ಲಿ ಮಾರಾಟವಾಗುವ ತರಕಾರಿಗಳಲ್ಲಿ ಸೀಸದ(ಲೆಡ್) ಪ್ರಮಾಣ ಹೆಚ್ಚಿದೆ ಎಂದು ತಿಳಿಸಿದ್ದು, ಈ ತರಕಾರಿ ತಿಂದ್ರೆ ಕಿಡ್ನಿ, ಮೆದುಳಿಗೆ ಸಮಸ್ಯೆಯಾಗುತ್ತದೆ. ಸಂಗ್ರಹಿಸಿದ 72 ಮಾದರಿಗಳ ಪೈಕಿ 10 ಮಾದರಿಗಳಲ್ಲಿ 8 ಕೀಟನಾಶಕ ಅವಶೇಷಗಳು ಪತ್ತೆಯಾಗಿದೆ. ನಗರದ ವಿವಿಧ ಮಾರುಕಟ್ಟೆಗಳಲ್ಲಿ ಕಂಡುಬರುವ ತರಕಾರಿಗಳಲ್ಲಿ ಸೀಸದ ಪ್ರಮಾಣ ಮಿತಿಗಿಂತ ಹೆಚ್ಚು ಮಟ್ಟದಲ್ಲಿದೆ.

ಕಳೆದ ವರ್ಷ ಸಂಗ್ರಹಿಸಲಾದ 72 ತರಕಾರಿ ಮಾದರಿಗಳ ಸಮಗ್ರ ವಿಶ್ಲೇಷಣೆಯ ನಂತರ ಹೆಚ್ಚಿನ ಪ್ರಮಾಣದ ಸೀಸದ 19 ಮಾದರಿಗಳು ಪತ್ತೆಯಾಗಿದೆ. ಸೋರೆಕಾಯಿಯಲ್ಲಿ ಗಮನಿಸಲಾದ ಸೀಸದ ಸಾಂದ್ರತೆಯು 1.75ಎಂಜಿ/ಕೆಜಿ  ಪತ್ತೆಯಾಗಿದೆ. ತರಕಾರಿ ಬೆಳೆಯುವ ಮಣ್ಣು ಕೂಡ ಪರೀಕ್ಷೆಗೆ ಒಳಪಡಿಸಿದಾಗ ಕೀಟನಾಶಕ ಅಂಶ ಪತ್ತೆಯಾಗಿದೆ. ಕೋಲಾರ, ಚಿಕ್ಕಬಳ್ಳಾಪುರ, ನೆಲಮಂಗಲದ ಹೊಲಗಳಿಂದ 23 ಮಾದರಿ ಮಣ್ಣು ಪರೀಕ್ಷೆ ಮಾಡಲಾಗಿದ್ದು, ಈ ಸಂಗ್ರಹವಾದ ಮಣ್ಣು ಕೂಡ ಕಲುಷಿತ ಎಂದು ತಿಳಿದುಬಂದಿದೆ. ನಗರದ ತರಕಾರಿಗಳಲ್ಲಿ ಅಪಾಯಕಾರಿ ಅಂಶಗಳ ಬಗ್ಗೆ ಜನರ ದೂರು ನೀಡಿದ್ದರು. ಈ ಹಿನ್ನೆಲೆ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿತ್ತು. ಭಾರತೀಯ ಆಹಾರ ಸುರಕ್ಷತೆ ಮತ್ತು ಮಾನದಂಡಗಳ ಜಂಟಿ ಸಮಿತಿ ಜಂಟಿಯಾಗಿ ವರದಿ ಸಲ್ಲಿಸಿದ್ದು, ವರದಿಯಲ್ಲಿ ಆತಂಕಕಾರಿ ಅಂಶ ಬೆಳಕಿಗೆ ಬಂದಿದ್ದು, ತರಕಾರಿಯಲ್ಲಿ ಕಲುಷಿತ ಅಂಶವಿದೆ ಎಂಬುದು ದೃಢವಾಗಿದೆ.

Be the first to comment

Leave a Reply

Your email address will not be published. Required fields are marked *

ad image