ಇತಿಹಾಸ ಸೃಷ್ಟಿಸಿದ ಪ್ರಧಾನಿ ಮೋದಿ; ಇನ್‌ಸ್ಟಾಗ್ರಾಮ್‌ನಲ್ಲಿ 100 ಮಿಲಿಯನ್ ಫಾಲೋವರ್ಸ್​ಗಳನ್ನು ಹೊಂದಿದ ಮೊದಲ ವಿಶ್ವನಾಯಕ!

ಇನ್‌ಸ್ಟಾಗ್ರಾಮ್‌ನಲ್ಲಿ 100 ಮಿಲಿಯನ್ ಫಾಲೋವರ್‌ಗಳನ್ನು ದಾಟಿದ ಮೊದಲ ವಿಶ್ವ ನಾಯಕ ಎಂಬ ಹೆಗ್ಗಳಿಕೆಗೆ ಪ್ರಧಾನಿ ನರೇಂದ್ರ ಮೋದಿ ಪಾತ್ರರಾಗಿದ್ದಾರೆ. ಪ್ರಧಾನಿ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಬ್ರೆಜಿಲ್ ಅಧ್ಯಕ್ಷ ಲುಲಾ ಮತ್ತು ಟರ್ಕಿಶ್ ಅಧ್ಯಕ್ಷ ಎರ್ಡೋಗನ್ ಸೇರಿದಂತೆ ಹಲವಾರು ಜಾಗತಿಕ ನಾಯಕರನ್ನು ಹಿಂದಿಕ್ಕಿದ್ದಾರೆ.

ನವದೆಹಲಿ, ಫೆ.26: ಇನ್‌ಸ್ಟಾಗ್ರಾಮ್‌ನಲ್ಲಿ (Instagram) 100 ಮಿಲಿಯನ್ ಫಾಲೋವರ್‌ಗಳನ್ನು ದಾಟಿದ ಮೊದಲ ವಿಶ್ವ ನಾಯಕ ಎಂಬ ಹೆಗ್ಗಳಿಕೆಗೆ ಪ್ರಧಾನಿ ನರೇಂದ್ರ ಮೋದಿ (PM Narendra Modi) ಪಾತ್ರರಾಗಿದ್ದಾರೆ. ಈ ಮೂಲಕ ಪ್ರಧಾನಿ ಐತಿಹಾಸಿಕ ಮೈಲಿಗಲ್ಲನ್ನು ದಾಟಿದ್ದಾರೆ. ಮೆಟಾ-ಮಾಲೀಕತ್ವದ ಸಾಮಾಜಿಕ ಜಾಲತಾಣದಲ್ಲಿ ಈ ಮೈಲಿಗಲ್ಲು ಸಾಧಿಸಿದ ಮೊದಲ ಜಾಗತಿಕ ನಾಯಕ ಮತ್ತು ರಾಜಕಾರಣಿ ಎಂಬ ಹೆಗ್ಗಳಿಕೆಗೆ ಅವರು ಪಾತ್ರರಾಗಿದ್ದಾರೆ.

ಭಾರತೀಯ ಪ್ರಧಾನಿ 2014 ರಲ್ಲಿ ಸಾಮಾಜಿಕ ಮಾಧ್ಯಮವನ್ನು ಸೇರಿದರು. ಅದೇ ವರ್ಷ ಅವರು 336 ಸ್ಥಾನಗಳೊಂದಿಗೆ ಬಿಜೆಪಿಯನ್ನು ಅಧಿಕಾರಕ್ಕೆ ತಂದರು. ಕಳೆದ 12 ವರ್ಷಗಳಲ್ಲಿ, ಲಕ್ಷಾಂತರ ಅನುಯಾಯಿಗಳು ಅವರ ಇನ್‌ಸ್ಟಾಗ್ರಾಮ್ ಖಾತೆಯನ್ನು ಫಾಲೋ ಮಾಡುತ್ತಿದ್ದಾರೆ.

ಪ್ರಧಾನಿ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಬ್ರೆಜಿಲ್ ಅಧ್ಯಕ್ಷ ಲುಲಾ ಮತ್ತು ಟರ್ಕಿಶ್ ಅಧ್ಯಕ್ಷ ಎರ್ಡೋಗನ್ ಸೇರಿದಂತೆ ಹಲವಾರು ಜಾಗತಿಕ ನಾಯಕರನ್ನು ಹಿಂದಿಕ್ಕಿದ್ದಾರೆ. ಡೊನಾಲ್ಡ್ ಟ್ರಂಪ್ ಇನ್‌ಸ್ಟಾಗ್ರಾಮ್‌ನಲ್ಲಿ 43.2 ಮಿಲಿಯನ್ ಫಾಲೋವರ್ಸ್‌ಗಳೊಂದಿಗೆ ಎರಡನೇ ಸ್ಥಾನದಲ್ಲಿದ್ದರೆ, ಇಂಡೋನೇಷ್ಯಾ ಅಧ್ಯಕ್ಷ ಪ್ರಬೋವೊ ಸುಬಿಯಾಂಟೊ 15 ಮಿಲಿಯನ್, ಲುಲಾ 14.4 ಮಿಲಿಯನ್, ಎರ್ಡೋನ್ 11.6 ಮಿಲಿಯನ್ ಮತ್ತು ಅರ್ಜೆಂಟೀನಾ ಅಧ್ಯಕ್ಷ ಜೇವಿಯರ್ ಮಿಲೀ 6.4 ಮಿಲಿಯನ್ ಫಾಲೋವರ್ಸ್‌ಗಳೊಂದಿಗೆ ನಂತರದ ಸ್ಥಾನದಲ್ಲಿದ್ದಾರೆ.

ಜಾಗತಿಕ ನಾಯಕರ ಜೊತೆಗೆ, ಮೋದಿ ಅವರು ಭಾರತದಲ್ಲಿ ತಮ್ಮ ವಿರೋಧಿಗಳು ಮತ್ತು ಪಕ್ಷದ ಸಹವರ್ತಿಗಳನ್ನು ಸಹ ಫಾಲೋವರ್‌ಗಳ ಸಂಖ್ಯೆಯಲ್ಲಿ ಹಿಂದಿಕ್ಕಿದ್ದಾರೆ. ಮೋದಿ ನಂತರ, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಅತಿ ಹೆಚ್ಚು ಫಾಲೋವರ್‌ಗಳನ್ನು ಹೊಂದಿದ್ದಾರೆ. ಯೋಗಿ 16.1 ಮಿಲಿಯನ್ ಫಾಲೋವರ್ಸ್‌ಗಳನ್ನು ಹೊಂದಿದ್ದಾರೆ. ವಿರೋಧ ಪಕ್ಷದ ನಾಯಕ ಮತ್ತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇನ್‌ಸ್ಟಾಗ್ರಾಮ್‌ನಲ್ಲಿ 12.6 ಮಿಲಿಯನ್ ಫಾಲೋವರ್‌ಗಳೊಂದಿಗೆ ಮೂರನೇ ಸ್ಥಾನದಲ್ಲಿದ್ದಾರೆ.

ಇಸ್ರೆಲ್‌ನಲ್ಲಿ ಪ್ರಧಾನಿ ಮೋದಿಗೆ ಆತ್ಮೀಯ ಸ್ವಾಗತ

ಭಾರತ ಮತ್ತು ಇಸ್ರೇಲ್ ನಡುವಿನ ಸಂಬಂಧ ಬಲವರ್ಧನೆಗಾಗಿ ಎರಡು ದಿನಗಳ ಇಸ್ರೇಲ್ ಪ್ರವಾಸ ಕೈಗೊಂಡ ಪ್ರಧಾನಿ ನರೇಂದ್ರ ಮೋದಿ ಅವರನ್ನು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರು ಬುಧವಾರ (ಫೆ.25) ಟೆಲ್ ಅವೀವ್‌ನ ಬೆನ್ ಗುರಿಯನ್ ವಿಮಾನ ನಿಲ್ದಾಣದಲ್ಲಿ ಬಿಗಿದಪ್ಪಿ ಸ್ವಾಗತಿಸಿದರು. ಬಳಿಕ ಸಾಮಾಜಿಕ ಮಾಧ್ಯಮದ ಎಕ್ಸ್ ಖಾತೆಯಲ್ಲಿ ಈ ವಿಷಯವನ್ನು ಹಂಚಿಕೊಂಡ ಅವರು ನನ್ನ ಆತ್ಮೀಯ ಗೆಳೆಯ ನರೇಂದ್ರ ಮೋದಿ ಅವರಿಗೆ ಇಸ್ರೇಲ್‌ಗೆ ಸ್ವಾಗತ ಎಂದು ಹೇಳಿದ್ದಾರೆ.

Be the first to comment

Leave a Reply

Your email address will not be published. Required fields are marked *

ad image