ಇಂದಿನಿಂದ ದ್ವಿತೀಯ PUC ಪರೀಕ್ಷೆ; ಅಕ್ರಮ ತಡೆಗೆ ಕಟ್ಟೆಚ್ಚರ

ಬೆಂಗಳೂರು: ರಾಜ್ಯ ಪದವಿ ಪೂರ್ವ ಶಿಕ್ಷಣ ಇಲಾಖೆ ನಡೆಸುವ ದ್ವಿತೀಯ ಪಿಯುಸಿ ಪರೀಕ್ಷೆ-1 (2nd PUC Exam) ಇಂದಿನಿಂದ ಶುರುವಾಗುತ್ತಿದ್ದು, ಈ ಬಾರಿ 7,10,363 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದಾರೆ.

ಮಾ.17 ರ ವರೆಗೆ ನಡೆಯುವ ಪರೀಕ್ಷೆಗೆ ರಾಜ್ಯಾದ್ಯಂತ 1,217 ಕೇಂದ್ರಗಳನ್ನು ಗುರುತಿಸಲಾಗಿದೆ. ಅಕ್ರಮ, ಗೊಂದಲಗಳಿಗೆ ಅವಕಾಶವಾಗದೇ ಸುಸೂತ್ರವಾಗಿ ಪರೀಕ್ಷೆ ನಡೆಸಲು ಇಲಾಖೆ ಪೂರ್ವ ಸಿದ್ಧತೆ ಹಾಗೂ ಭದ್ರತಾ ವ್ಯವಸ್ಥೆ ಮಾಡಿಕೊಂಡಿದೆ. ಮೊದಲ ದಿನವಾದ ಇಂದು ಕನ್ನಡ ಮತ್ತು ಅರೇಬಿಕ್ ವಿಷಯಗಳ ಪರೀಕ್ಷೆಗಳು ನಡೆಯಲಿದ್ದು, ಬೆಳಗ್ಗೆ 10 ರಿಂದ ಮಧ್ಯಾಹ್ನ 1 ಗಂಟೆ ವರೆಗೆ ನಡೆಯಲಿದೆ.

ಇನ್ನೂ ದ್ವಿತೀಯ ಪಿಯುಸಿ ಪರೀಕ್ಷೆ ಬರೆಯುತ್ತಿರುವ ರಾಜ್ಯದ ಎಲ್ಲಾ ವಿದ್ಯಾರ್ಥಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ಎಕ್ಸ್‌ನಲ್ಲಿ ಸಂದೇಶ ಹಂಚಿಕೊಳ್ಳುವ ಮೂಲಕ ಶುಭಹಾರೈಸಿದ್ದಾರೆ. ದ್ವಿತೀಯ ಪಿಯುಸಿ ಪರೀಕ್ಷೆ ಎದುರಿಸುತ್ತಿರುವ ರಾಜ್ಯದ ಎಲ್ಲಾ ವಿದ್ಯಾರ್ಥಿಗಳಿಗೆ ಶುಭ ಹಾರೈಕೆಗಳು. ಆತ್ಮವಿಶ್ವಾಸದಿಂದ ಪರೀಕ್ಷೆ ಬರೆಯಿರಿ, ಉತ್ತಮ ಅಂಕಗಳ ಜೊತೆಗೆ ಉಜ್ವಲ ಭವಿಷ್ಯವೂ ನಿಮ್ಮದಾಗಲಿ ಎಂದು ಹಾರೈಸುತ್ತೇನೆ ಎಂದು ತಿಳಿಸಿದ್ದಾರೆ.

ಎಕ್ಸಾಂಗೆ ಬೋರ್ಡ್ ಸಿದ್ಧತೆ, ಮುನ್ನೆಚ್ಚರಿಕಾ ಕ್ರಮಗಳು ಹೇಗಿವೆ?
>. ಪರೀಕ್ಷೆ ನಡೆಯೋ ದಿನದಿಂದ ಪರೀಕ್ಷಾ ಕೇಂದ್ರದ ಸುತ್ತ 200 ಮೀಟರ್ ನಿಷೇಧಾಜ್ಞೆ ಜಾರಿ.
>. ಪರೀಕ್ಷಾ ಕೇಂದ್ರದ ಸುತ್ತಮುತ್ತಲಿನ ಜೆರಾಕ್ಸ್ ಅಂಗಡಿ, ಸೈಬರ್ ಸೆಂಟರ್, ಕಂಪ್ಯೂಟರ್ ಶಾಪ್ ಬಂದ್‌ಗೆ ಕ್ರಮ.
>. ಹಿಂದಿನ ಪರೀಕ್ಷೆಗಳಲ್ಲಿ ಅಕ್ರಮದಲ್ಲಿ ಭಾಗಿಯಾಗಿರೋ ವ್ಯಕ್ತಿಗಳ ಮೇಲೆ ಪೊಲೀಸ್ ಇಲಾಖೆಯಿಂದ ವಿಶೇಷ ನಿಗಾ.
>. ಪರೀಕ್ಷೆ ನಡೆಯೋ ಎಲ್ಲಾ ಕೇಂದ್ರಗಳಲ್ಲಿ ಸಿಸಿಟಿವಿ ಕ್ಯಾಮೆರಾ ಅಳವಡಿಕೆ.
>. ಸುಳ್ಳು ಸುದ್ದಿ ಹರಡಿಸೋ ಸಾಮಾಜಿಕ ಜಾಲತಾಣಗಳ ಮೇಲೆ ನಿಗಾ ಇಡಲು ಪೊಲೀಸ್ ಇಲಾಖೆ ನೇತೃತ್ವದಲ್ಲಿ ವಿಶೇಷ ತಂಡದ ರಚನೆ.
>. ಇಡೀ ಪರೀಕ್ಷಾ ವ್ಯವಸ್ಥೆ ಮಾನಿಟರ್ ಮಾಡಲು ವೆಬ್ ಕ್ಯಾಸ್ಟಿಂಗ್ ವ್ಯವಸ್ಥೆ. ಪ್ರತಿ ಜಿಲ್ಲೆ ಡಿಸಿಗಳು, ಎಸ್ಪಿಗಳು ಮಾನಿಟರ್ ಮಾಡಲು ವ್ಯವಸ್ಥೆ.
>. ಪ್ರಶ್ನೆ ಪತ್ರಿಕೆ ಖಜಾನೆಯಿಂದ ಕೇಂದ್ರಗಳಿಗೆ ಹೋಗೋವಾಗ ಬಿಗಿ ಪೊಲೀಸ್ ಭದ್ರತೆ. ಪ್ರಶ್ನೆ ಪತ್ರಿಕೆ ರವಾನೆ ವಿಡಿಯೋ ಚಿತ್ರೀಕರಣದ ವ್ಯವಸ್ಥೆ.
>. ನಿಗದಿ ಮಾಡಿದ ಸಮಯಕ್ಕಿಂತ ಮೊದಲು ಪ್ರಶ್ನೆ ಪತ್ರಿಕೆ ಖಜಾನೆಯಿಂದ ಓಪನ್ ಮಾಡುವಂತೆ ಇಲ್ಲ. ಅಂತಹ ಘಟನೆ ಕಂಡು ಬಂದ್ರೆ ಜವಾಬ್ದಾರಿ ಕೊಟ್ಟಿರುವವರ ಮೇಲೆ ಕಾನೂನು ಕ್ರಮ.
>. ಪ್ರಶ್ನೆ ಪತ್ರಿಕೆ ಜವಾಬ್ದಾರಿವಹಿಸಿರೋರು ಅಕ್ರಮದಲ್ಲಿ ಭಾಗಿಯಾದ್ರೆ ಕಾನೂನು ಕ್ರಮಕ್ಕೆ ಎಚ್ಚರಿಕೆ.
>. ಪರೀಕ್ಷಾ ಕೇಂದ್ರದಲ್ಲಿ ವಿದ್ಯಾರ್ಥಿಗಳು, ಸಿಬ್ಬಂದಿಗೆ, ಅಧಿಕಾರಿಗಳಿಗೆ ಸಂಪೂರ್ಣ ಫೋನ್ ನಿಷೇಧ.
>. ಪರೀಕ್ಷಾ ಕೇಂದ್ರಗಳಿಗೆ ವಾಚ್ ಸೇರಿ ಎಲೆಕ್ಟ್ರಾನಿಕ್ ಉಪಕರಣಗಳು ನಿಷೇಧ.
>. ಪ್ರತಿ ಪರೀಕ್ಷಾ ಕೇಂದ್ರಕ್ಕೆ ಪೊಲೀಸ್ ಭದ್ರತೆ. ಜಿಲ್ಲೆಗಳಲ್ಲಿ ಎಸ್ಪಿ, ಡಿಸಿಗಳ ನೇತೃತ್ವದಲ್ಲಿ ಭರವಸೆ.
>. ಪ್ರತಿ ಕೇಂದ್ರದಲ್ಲಿ ಸಿಟ್ಟಿಂಗ್ ಸ್ಕ್ವಾಡ್, ಫ್ಲೈಯಿಂಗ್ ಸ್ಕ್ವಾಡ್ ನಿಯೋಜನೆ. ಪ್ರತಿ ಕೇಂದ್ರದಲ್ಲಿ ಪೊಲೀಸರ ವ್ಯವಸ್ಥೆ.

ದ್ವೀತಿಯ ಪಿಯುಸಿ ಪರೀಕ್ಷೆ 1 ವೇಳಾಪಟ್ಟಿ

ಫೆಬ್ರವರಿ 28- ಕನ್ನಡ, ಅರೇಬಿಕ್
ಮಾರ್ಚ್ 2- ಭೂಗೋಳ ಶಾಸ್ತ್ರ, ಸಂಖ್ಯಾಶಾಸ್ತ್ರ, ಮನಃಶಾಸ್ತ್ರ.
ಮಾರ್ಚ್ 3- ಇಂಗ್ಲೀಷ್
ಮಾರ್ಚ್ 4- ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ, ಫ್ರೆಂಚ್.
ಮಾರ್ಚ್ 5- ಇತಿಹಾಸ
ಮಾರ್ಚ್ 6- ಭೌತಶಾಸ್ತ್ರ
ಮಾರ್ಚ್ 7- ಐಚ್ಛಿಕ ಕನ್ನಡ, ವ್ಯವಹಾರ ಅಧ್ಯಯನ, ಭೂಗರ್ಭ ಶಾಸ್ತ್ರ.
ಮಾರ್ಚ್ 9- ರಸಾಯನಶಾಸ್ತ್ರ, ಶಿಕ್ಷಣಶಾಸ್ತ್ರ, ಮೂಲ ಗಣಿತ
ಮಾರ್ಚ್ 10- ಅರ್ಥಶಾಸ್ತ್ರ
ಮಾರ್ಚ್ 11- ತರ್ಕಶಾಸ್ತ್ರ, ವಿದ್ಯುನ್ಮಾನಶಾಸ್ತ್ರ, ಗೃಹ ವಿಜ್ಞಾನ
ಮಾರ್ಚ್ 12- ಹಿಂದಿ
ಮಾರ್ಚ್ 13- ರಾಜ್ಯಶಾಸ್ತ್ರ
ಮಾರ್ಚ್ 14- ಲೆಕ್ಕಶಾಸ್ತ್ರ, ಗಣಿತ
ಮಾರ್ಚ್ 16- ಸಮಾಜಶಾಸ್ತ್ರ, ಜೀವಶಾಸ್ತ್ರ, ಗಣಕ ವಿಜ್ಞಾನ.
ಮಾರ್ಚ್ 17- ಹಿಂದೂಸ್ತಾನಿ, ಸಂಗೀತ, ರೀಟೇಲ್ ಆಟೋಮೊಬೈಲ್, ಆರೋಗ್ಯ ರಕ್ಷಣೆ.

Be the first to comment

Leave a Reply

Your email address will not be published. Required fields are marked *

ad image