ಅರಬ್ ದೇಶಗಳಲ್ಲಿ ವಾಸಿಸುತ್ತಿರುವ ಕನ್ನಡಿಗರ ಸುರಕ್ಷತೆಯ ಬಗ್ಗೆ ಮುಖ್ಯ ಕಾರ್ಯದರ್ಶಿ, ಸ್ಥಾನಿಕ ಆಯುಕ್ತರೊಂದಿಗೆ ಚರ್ಚಿಸಲಾಗಿದೆ. ದುಬೈ ವಿಮಾನ ನಿಲ್ದಾಣ ಬಂದ್ ಮಾಡಲಾಗಿದ್ದು, ಅದನ್ನು ತೆರೆದ ಮೇಲೆ ಅವರನ್ನು ಭಾರತಕ್ಕೆ ಸುರಕ್ಷಿತವಾಗಿ ಕರೆ ತರಲು ವ್ಯವಸ್ಥೆ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ಅಮೆರಿಕವು ಇರಾನ್ ಮೇಲೆ ಮಾಡಿರುವ ದಾಳಿ ಅನಗತ್ಯವಾದುದ್ದು. ಒಂದೆಡೆ ಶಾಂತಿ ಮಾತ್ರ ಪಠಿಸುವ ಅಮೆರಿಕ ಮತ್ತೊಂದೆಡೆ ಯುದ್ಧ ಮಾಡುತ್ತದೆ. ಅಮೆರಿಕ ತದ್ವಿರುದ್ಧವಾದ ನಿಲುವು ಹೊಂದಿದ್ದು, ಇದನ್ನು ಖಂಡಿಸುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗಳಿಗೆ ಭಾನುವಾರ ಪ್ರತಿಕ್ರಿಯೆ ನೀಡಿರುವ ಅವರು, ಇರಾನ್ನ ಸರ್ವೋಚ್ಚ ನಾಯಕ ಅಯಾತೊಲ್ಲಾ ಅಲಿ ಖಮೇನಿ ಹತ್ಯೆಯಾಗಿದ್ದು, ಅವರ ಆತ್ಮಕ್ಕೆ ಚಿರಶಾಂತಿ ದೊರೆಯಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಹೇಳಿದ್ದಾರೆ.
ಅರಬ್ ದೇಶಗಳಲ್ಲಿ ವಾಸಿಸುತ್ತಿರುವ ಕನ್ನಡಿಗರ ಸುರಕ್ಷತೆಯ ಬಗ್ಗೆ ಮುಖ್ಯ ಕಾರ್ಯದರ್ಶಿ, ಸ್ಥಾನಿಕ ಆಯುಕ್ತರೊಂದಿಗೆ ಚರ್ಚಿಸಲಾಗಿದೆ. ದುಬೈ ವಿಮಾನ ನಿಲ್ದಾಣ ಬಂದ್ ಮಾಡಲಾಗಿದ್ದು, ಅದನ್ನು ತೆರೆದ ಮೇಲೆ ಅವರನ್ನು ಭಾರತಕ್ಕೆ ಸುರಕ್ಷಿತವಾಗಿ ಕರೆ ತರಲು ವ್ಯವಸ್ಥೆ ಮಾಡಲಾಗುವುದು. ವಿಧಾನ ಪರಿಷತ್ ಸದಸ್ಯ ಭೋಜೇಗೌಡರು ದುಬೈನಲ್ಲಿದ್ದು, ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿದ್ದೇನೆ. ಈ ವೇಳೆ ತಾವು ಹೋಟೆಲಿನಲ್ಲಿ ಸುರಕ್ಷಿತವಾಗಿರುವುದಾಗಿ ಹೇಳಿರುವುದಾಗಿ ಸಿಎಂ ತಿಳಿಸಿದ್ದಾರೆ.






Be the first to comment
Leave a Reply