ಟಾಕ್ಸಿಕ್ ಸಿನಿಮಾ ರಿಲೀಸ್ ಮುಂದಕ್ಕೆ; ಯಶ್‌ ಫ್ಯಾನ್ಸ್‌ ಶಾಕ್‌! ಕಾರಣ ಇದು

ಯಶ್ ಅವರ ಬಹುನಿರೀಕ್ಷಿತ ಚಿತ್ರ ‘ಟಾಕ್ಸಿಕ್: ಎ ಫೇರಿ ಟೇಲ್ ಫಾರ್ ಗ್ರೋನಪ್ಸ್’ ಮಾರ್ಚ್ 19 ರಂದು ಅದ್ದೂರಿಯಾಗಿ ಬಿಡುಗಡೆಯಾಗಬೇಕಿತ್ತು. ಈಗ ಚಿತ್ರವನ್ನು ಜೂನ್‌ಗೆ ಮುಂದೂಡಲಾಗಿದ್ದು, ತಂಡ ಅಧಿಕೃತ ಮಾಹಿತಿ ಹಂಚಿಕೊಂಡಿದೆ. ಯಶ್ (Yash) ಅವರ ಬಹುನಿರೀಕ್ಷಿತ ಚಿತ್ರ ‘ಟಾಕ್ಸಿಕ್: ಎ ಫೇರಿಟೇಲ್ ಫಾರ್ ಗ್ರೋನ್ ಅಪ್ಸ್’ ಮಾರ್ಚ್ 19 ರಂದು ಅದ್ದೂರಿಯಾಗಿ ಬಿಡುಗಡೆಯಾಗಬೇಕಿತ್ತು.

ಯಶ್ ಅವರ ಬಹುನಿರೀಕ್ಷಿತ ಚಿತ್ರ ‘ಟಾಕ್ಸಿಕ್: ಎ ಫೇರಿ ಟೇಲ್ ಫಾರ್ ಗ್ರೋನಪ್ಸ್’ (Toxic: A Fairy Tale for Grownups) ಮಾರ್ಚ್ 19 ರಂದು ಅದ್ದೂರಿಯಾಗಿ ಬಿಡುಗಡೆಯಾಗಬೇಕಿತ್ತು. ಈಗ ಚಿತ್ರವನ್ನು ಜೂನ್‌ಗೆ ಮುಂದೂಡಲಾಗಿದ್ದು, ತಂಡ ಅಧಿಕೃತ ಮಾಹಿತಿ ಹಂಚಿಕೊಂಡಿದೆ. ಯಶ್ (Yash) ಅವರ ಬಹುನಿರೀಕ್ಷಿತ ಚಿತ್ರ ‘ಟಾಕ್ಸಿಕ್: ಎ ಫೇರಿಟೇಲ್ ಫಾರ್ ಗ್ರೋನ್ ಅಪ್ಸ್’ ಮಾರ್ಚ್ 19 ರಂದು ಅದ್ದೂರಿಯಾಗಿ ಬಿಡುಗಡೆಯಾಗಬೇಕಿತ್ತು. ಗೀತು ಮೋಹನ್ ದಾಸ್ ನಿರ್ದೇಶನದ ಈ ಚಿತ್ರವು ರಣವೀರ್ ಸಿಂಗ್ ಅವರ ‘ಧುರಂಧರ್: ದಿ ರಿವೆಂಜ್’ ಚಿತ್ರದೊಂದಿಗೆ ಬಾಕ್ಸ್ ಆಫೀಸ್ ನಲ್ಲಿ ಕ್ಲ್ಯಾಶ್‌ ಆಗೊದಿತ್ತು. ಆದರೀಗ ತಂಡ ಬಿಗ್‌ ಅಪ್‌ಡೇಟ್‌ ನೀಡಿದೆ.

ಈ ದಿನ ಸಿನಿಮಾ ರಿಲೀಸ್‌

ಕೆವಿಎನ್ ಪ್ರೊಡಕ್ಷನ್ಸ್ ಮತ್ತು ಮಾನ್ಸ್ಟರ್ ಮೈಂಡ್ ಕ್ರಿಯೇಷನ್ಸ್ ಇಂದು ‘ಟಾಕ್ಸಿಕ್: ಎ ಫೇರಿ ಟೇಲ್ ಫಾರ್ ಗ್ರೋನ್-ಅಪ್ಸ್’ ನ ಪೋಸ್ಟ್‌ಪೋನ್‌ ಆಗಿರುವುದರ ಬಗ್ಗೆ ಮಾಹಿತಿ ಹಂಚಿಕೊಂಡಿದೆ. ಮಾರ್ಚ್ 19, 2026 ರಂದು ವಿಶ್ವಾದ್ಯಂತ ಬಿಡುಗಡೆ ಆಗಬೇಕಿದ್ದ ಸಿನಿಮಾ ಜೂನ್ 4, 2026ರಂದು ರಿಲೀಸ್‌ ಆಗಲಿದೆ. ಮಧ್ಯಪ್ರಾಚ್ಯ ಸಂಘರ್ಷ ಬಿಗಡಾಯಿಸಿದ ಕಾರಣ ಈ ನಿರ್ಧಾರಕ್ಕೆ ಬಂದಿದೆ ತಂಡ.

ಪರಿಣಾಮವಾಗಿ ಗಲ್ಫ್ ದೇಶಗಳಲ್ಲಿ ಸಿನಿಮಾ ಪ್ರಚಾರಕ್ಕೆ ತೊಂದರೆಯಾಗಲಿದೆ.ಹೀಗಾಗಿ ಈ ನಿರ್ಧಾರವನ್ನು ತಂಡ ತೆಗೆದುಕೊಂಡಿದೆ. ಚಿತ್ರದ ಮೊದಲ ಬಿಡುಗಡೆ ದಿನಾಂಕ 19 ಮಾರ್ಚ್ 2026 ಕ್ಕಿಂತ ಮೊದಲೇ ನಿರ್ಮಾಪಕರು ಚಿತ್ರದ ಅಂತಿಮ ಪ್ರಚಾರ ವೇಳಾಪಟ್ಟಿಯನ್ನು ಈಗಾಗಲೇ ರೂಪಿಸಿದ್ದರು.

ತಂಡ ಮಾಹಿತಿ ಹಂಚಿಕೊಂಡಿದ್ದು ಹೀಗೆ, ಪ್ರಸ್ತುತ ಜಗತ್ತಿನಲ್ಲಿ (ವಿಶೇಷವಾಗಿ ಮಧ್ಯಪ್ರಾಚ್ಯದಲ್ಲಿ) ಉಂಟಾಗಿರುವ ಅನಿಶ್ಚಿತತೆಯು, ಚಿತ್ರವನ್ನು ಸಾಧ್ಯವಾದಷ್ಟು ಹೆಚ್ಚಿನ ಸಂಖ್ಯೆಯ ಪ್ರೇಕ್ಷಕರಿಗೆ ತಲುಪಿಸುವ ನಮ್ಮ ಗುರಿಯ ಮೇಲೆ ಪರಿಣಾಮ ಬೀರಿದೆ.

ಆದ್ದರಿಂದ, ನಮ್ಮ ಪಾಲುದಾರರ ಮತ್ತು ಪ್ರೇಕ್ಷಕರ ಹಿತದೃಷ್ಟಿಯಿಂದ, ಚಿತ್ರದ ಬಿಡುಗಡೆಯ ದಿನಾಂಕವನ್ನು ಮರುನಿಗದಿಪಡಿಸುವ ಕಠಿಣ ಹಾಗೂ ಎಚ್ಚರಿಕೆಯ ನಿರ್ಧಾರವನ್ನು ನಾವು ತೆಗೆದುಕೊಂಡಿದ್ದೇವೆ. ನಿಮ್ಮ ತಿಳುವಳಿಕೆ ಮತ್ತು ತಾಳ್ಮೆಗೆ ನಾವು ಧನ್ಯವಾದಗಳನ್ನು ಅರ್ಪಿಸುತ್ತೇವೆ ಹಾಗೂ ನಿಮ್ಮ ಪ್ರೀತಿ ಮತ್ತು ಬೆಂಬಲ ಹೀಗೆಯೇ ಇರಲಿ ಎಂದು ಆಶಿಸುತ್ತೇವೆ.

 

ಟಾಕ್ಸಿಕ್: ಎ ಫೇರಿ ಟೇಲ್ ಫಾರ್ ಗ್ರೋನ್-ಅಪ್ಸ್ ಎಂಬುದು ಜಾಗತಿಕ ಪ್ರೇಕ್ಷಕರಿಗಾಗಿ ಸಿನಿಮಾವನ್ನು ರಚಿಸುವ ದೃಷ್ಟಿಕೋನದಿಂದ ನಾವು ಕಲ್ಪಿಸಿಕೊಂಡ ಚಿತ್ರ ಎಂದು ಹೊಸ ದಿನಾಂಕ ಪ್ರಕಟಿಸಿದೆ. ಟಾಕ್ಸಿಕ್: ಎ ಫೇರಿ ಟೇಲ್ ಫಾರ್ ಗ್ರೋನ್-ಅಪ್ಸ್ಈ ಗ ಜೂನ್ 4, 2026 ರಂದು ಜಗತ್ತಿನಾದ್ಯಂತದ ಚಿತ್ರಮಂದಿರಗಳಲ್ಲಿ ಇಂಗ್ಲಿಷ್ ಮತ್ತು ಭಾರತೀಯ ಭಾಷೆಗಳಲ್ಲಿ ಬಿಡುಗಡೆಯಾಗಲಿದೆ. ಚಲನಚಿತ್ರಗಳಲ್ಲಿ ನಿಮ್ಮನ್ನು ಭೇಟಿಯಾಗುತ್ತೇವೆ ಎಂದು ಬರೆದುಕೊಂಡಿದೆ.

ಯಶ್, ನಯನತಾರಾ, ಕಿಯಾರಾ ಅಡ್ವಾಣಿ, ಹುಮಾ ಖುರೇಷಿ, ರುಕ್ಮಿಣಿ ವಸಂತ್ ಮತ್ತು ತಾರಾ ಸುತಾರಿಯಾ ಪ್ರಮುಖ ಪಾತ್ರಗಳಲ್ಲಿದ್ದಾರೆ. ಯಶ್ ಬರೆದು ಗೀತು ಮೋಹನ್‌ದಾಸ್ ನಿರ್ದೇಶಿಸಿದ ಈ ಚಿತ್ರವನ್ನು ಕನ್ನಡ ಮತ್ತು ಇಂಗ್ಲಿಷ್‌ನಲ್ಲಿ ಏಕಕಾಲದಲ್ಲಿ ಚಿತ್ರೀಕರಿ

ಕೆವಿಎನ್ ಪ್ರೊಡಕ್ಷನ್ಸ್ ಮತ್ತು ಮಾನ್ಸ್ಟರ್ ಮೈಂಡ್ ಕ್ರಿಯೇಷನ್ಸ್ ನಿರ್ಮಿಸಿದ ಟಾಕ್ಸಿಕ್: ಎ ಫೇರಿ ಟೇಲ್ ಫಾರ್ ಗ್ರೋನ್-ಅಪ್ಸ್ ಜೂನ್ 4, 2026 ರಂದು ಬಿಡುಗಡೆಯಾಗಲಿದೆ.ಸಲಾಗಿದೆ, ಹಿಂದಿ, ತಮಿಳು, ತೆಲುಗು ಮತ್ತು ಮಲಯಾಳಂನಲ್ಲಿ ಡಬ್ ಮಾಡಿದ ಆವೃತ್ತಿಗಳೊಂದಿಗೆ ಇದೆ.

Be the first to comment

Leave a Reply

Your email address will not be published. Required fields are marked *

ad image