
ಇರಾನ್ನ ನೂತನ ಸರ್ವೋಚ್ಚ ನಾಯಕನಾಗಿ ಮೊಜ್ತಬಾ ಖಮೇನಿ ನೇಮಕಗೊಂಡಿದ್ದಾರೆ. ಅಯತೊಲ್ಲಾ ಅಲಿ ಖಮೇನಿ ಅವರ ನಿಧನದ ನಂತರ ಈ ಮಹತ್ವದ ಹುದ್ದೆಯನ್ನು ವಹಿಸಿಕೊಂಡಿದ್ದಾರೆ. ಧಾರ್ಮಿಕ ಶಿಕ್ಷಣ ಪಡೆದ ಮೊಜ್ತಬಾ, ಕ್ರಾಂತಿಕಾರಿ ಗಾರ್ಡ್ನಲ್ಲಿ ಸೇವೆ ಸಲ್ಲಿಸಿದ್ದರು ಮತ್ತು ತಂದೆಯ ವಿಶ್ವಾಸಾರ್ಹ ಸಲಹೆಗಾರರಾಗಿದ್ದರು. ಈ ನೇಮಕವು ಇರಾನ್ನ ರಾಜಕೀಯ ಭವಿಷ್ಯ ಮತ್ತು ಪ್ರಾದೇಶಿಕ ಸ್ಥಿರತೆಯ ಮೇಲೆ ಹೇಗೆ ಪರಿಣಾಮ ಬೀರಲಿದೆ ಎಂಬುದು ಕುತೂಹಲಕಾರಿಯಾಗಿದೆ.
ಇರಾನ್ನ ಸರ್ವೋಚ್ಚ ನಾಯಕರಾಗಿದ್ದ ಅಲಿ ಖಮೇನಿ ಇಸ್ರೇಲ್, ಅಮೆರಿಕ ನಡೆಸಿದ್ದ ವೈಮಾನಿಕ ದಾಳಿಯಲ್ಲಿ ಮೃತಪಟ್ಟಿದ್ದರು. ಈಗ ಅವರ ಪುತ್ರ ಮೊಜ್ತಬಾ ಖಮೇನಿ ಅವರನ್ನು ದೇಶದ ಹೊಸ ಸರ್ವೋಚ್ಚ ನಾಯಕನನ್ನಾಗಿ ಆಯ್ಕೆ ಮಾಡಲಾಗಿದೆ. ಫೆಬ್ರವರಿ 28ರಂದು ಟೆಹ್ರಾನ್ನಲ್ಲಿ ನಡೆದ ವೈಮಾನಿಕ ದಾಳಿಯಲ್ಲಿ ಅಲಿ ಖಮೇನಿ ಅವರ ಕಚೇರಿಯನ್ನು ಗುರಿಯಾಗಿಸಿ ದಾಳಿ ನಡೆಸಲಾಗಿತ್ತು. ಆ ದಾಳಿಯಲ್ಲಿ ಖಮೇನಿ ಸಾವನ್ನಪ್ಪಿದ್ದರು. ಈ ಘಟನೆಯ ನಂತರ ಇರಾನ್ ಏಳು ದಿನಗಳ ಸಾರ್ವಜನಿಕ ರಜೆಯೊಂದಿಗೆ 40 ದಿನಗಳ ರಾಷ್ಟ್ರೀಯ ಶೋಕಾಚರಣೆಯನ್ನು ಘೋಷಿಸಿದೆ. ದೇಶಾದ್ಯಂತ ಭದ್ರತೆಯನ್ನು ಹೆಚ್ಚಿಸಲಾಗಿದ್ದು, ಪ್ರಮುಖ ನಗರಗಳು ಮತ್ತು ಸರ್ಕಾರಿ ಕಟ್ಟಡಗಳ ಹೊರಗೆ ಹೆಚ್ಚುವರಿ ಭದ್ರತಾ ಪಡೆಗಳನ್ನು ನಿಯೋಜಿಸಲಾಗಿದೆ.






Be the first to comment
Leave a Reply