Skip to content
ಸದ್ಯದಲ್ಲೇ ಆರ್‌ಸಿಬಿ ಅಭಿಮಾನಿಗಳಿಗೆ ಮತ್ತು ಕ್ರಿಕೆಟ್ ಪ್ರೇಮಿಗಳಿಗೆ ಗುಡ್ ನ್ಯೂಸ್ ಸಿಗುವ ಸಾಧ್ಯತೆ ಇದೆ. ಐಪಿಎಲ್ 2026ರ ಸೀಸನ್‌ಗೆ ಚಿನ್ನಸ್ವಾಮಿ ಸ್ಟೇಡಿಯಂ ಸಿದ್ಧವಾಗುತ್ತಿದ್ಯಾ, ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಪಂದ್ಯ ನಡೆಯುತ್ತಾ ಎಂಬುವುದು ಆರ್‌ಸಿಬಿ ಅಭಿಮಾನಿಗಳಿಗೆ ದೊಡ್ಡ ಪ್ರಶ್ನೆಯಾಗಿತ್ತು. ಈಗ ಈ ಪ್ರಶ್ನೆಗೆ ಸಕಾರಾತ್ಮಕ ಉತ್ತರ ಸಿಗುವ ಸಾಧ್ಯತೆ ಹೆಚ್ಚಾಗಿದೆ. ಇವತ್ತು ಕೂಡ ಅಧಿಕಾರಿಗಳ ತಂಡ ಚಿನ್ನಸ್ವಾಮಿ ಸ್ಟೇಡಿಯಂ ಪರಿಶೀಲನೆ ನಡೆಸಿದ್ದಾರೆ. ಭಾನುವಾರ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಉನ್ನತ ಮಟ್ಟದ ಅಧಿಕಾರಿಗಳ ಪರಿಶೀಲನೆ ನಡೆಯಿತು. ಜೊತೆಗೆ ಇಂದು ಕೂಡ ಅಧಿಕಾರಿಗಳ ತಂಡದಿಂದ ಪರಿಶೀಲನೆ ನಡೆದಿದ್ದು, ಈ ಪರಿಶೀಲನೆಯ ನಂತರ ಸ್ಟೇಡಿಯಂ ಶೀಘ್ರದಲ್ಲೇ ಆಟಕ್ಕೆ ಸಿದ್ಧವಾಗುವ ಸಾಧ್ಯತೆ ಕಂಡುಬರುತ್ತಿದೆ. ಗೃಹ ಇಲಾಖೆಯ ಜಂಟಿ ಕಮಿಷನರ್ ಮಹೇಶ್ವರ ರಾವ್, ಬೆಂಗಳೂರು ನಗರ ಪೊಲೀಸ್ ಕಮಿಷನರ್, ಆರ್‌ಸಿಬಿ ಮತ್ತು ಕೆಎಸ್‌ಸಿಎ ನಿಯೋಗದವರು ಸ್ಟೇಡಿಯಂಗೆ ಭೇಟಿ ನೀಡಿದರು. ಸ್ಟೇಡಿಯಂನ ಭದ್ರತಾ ವ್ಯವಸ್ಥೆ, ಪ್ರವೇಶದ್ವಾರಗಳು, ಆಸನ ವ್ಯವಸ್ಥೆ, ತುರ್ತು ನಿರ್ಗಮನ ಮಾರ್ಗಗಳು, ಸಿಸಿಟಿವಿ ಕ್ಯಾಮೆರಾಗಳು ಮತ್ತು ಇತರ ಸೌಲಭ್ಯಗಳನ್ನು ವಿವರವಾಗಿ ಪರಿಶೀಲಿಸಿದರು.

ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಳೆದ ವರ್ಷ ನಡೆದ ದುರಂತದ ನಂತರ ಜಸ್ಟೀಸ್ ಕುನ್ನಾ ಸಮಿತಿಯನ್ನು ರಚಿಸಲಾಗಿತ್ತು. ಈ ಸಮಿತಿಯ ವರದಿಯಲ್ಲಿ ಸ್ಟೇಡಿಯಂನ ಭದ್ರತಾ ವ್ಯವಸ್ಥೆಯಲ್ಲಿ ಹಲವು ಲೋಪಗಳನ್ನು ಗುರುತಿಸಲಾಗಿತ್ತು. ಆ ವರದಿಯ ಶಿಫಾರಸುಗಳನ್ನು ಅನುಷ್ಠಾನಗೊಳಿಸುವ ಬಗ್ಗೆ ಇತ್ತೀಚಿಗೆ ತೀವ್ರ ಚರ್ಚೆ ನಡೆಯುತ್ತಿತ್ತು. ಆರ್‌ಸಿಬಿ ಮ್ಯಾಚ್‌ಗಳನ್ನು ಚಿನ್ನಸ್ವಾಮಿಯಲ್ಲೇ ನಡೆಸಬೇಕು ಎಂಬುದು ಅಭಿಮಾನಿಗಳ ಮುಖ್ಯ ಬೇಡಿಕೆಯಾಗಿತ್ತು. ಈಗ ಗೃಹ ಇಲಾಖೆಯ ಅಧಿಕಾರಿಗಳು ಸ್ಟೇಡಿಯಂಗೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿರುವುದು ಸಕಾರಾತ್ಮಕ ಸಂಕೇತವಾಗಿದೆ. ಕುನ್ನಾ ವರದಿಯ ಶಿಫಾರಸು ಹೇಗೆ ಅನುಷ್ಠಾನಗೊಳಿಸಲಾಗಿದೆ ಎಂಬುದನ್ನು ಪರೀಕ್ಷಿಸುವುದು ಈ ಪರಿಶೀಲನೆಯ ಮುಖ್ಯ ಉದ್ದೇಶವಾಗಿದೆ. ಸ್ಟೇಡಿಯಂನ ಭದ್ರತಾ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸುವ ಬಗ್ಗೆ ಚರ್ಚೆ ನಡೆಯುತ್ತಿದೆ. ಮುಂಬರುವ ದಿನಗಳಲ್ಲಿ ಸ್ಟೇಡಿಯಂಗೆ ಅನುಮತಿ ಸಿಗುವ ಸಾಧ್ಯತೆ ಹೆಚ್ಚಿದೆ. ಈ ಪರಿಶೀಲನೆಯಿಂದ ಭದ್ರತಾ ವ್ಯವಸ್ಥೆ ಮತ್ತಷ್ಟು ಬಲಪಡಿಸಲಾಗುವುದು ಎಂಬ ನಿರೀಕ್ಷೆಯಿದೆ. Rcb ಅಭಿಮಾನಿಗಳು ಈಗ ಆಶಾಭಾವಿಯಾಗಿದ್ದಾರೆ. ಶೀಘ್ರದಲ್ಲೇ ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಪಂದ್ಯಗಳು ನಡೆಯುವ ಸಾಧ್ಯತೆ ಹೆಚ್ಚಿದೆ.
Be the first to comment
Leave a Reply