ನೆಲಮಂಗಲ ಬಳಿ ಭೀಕರ ಅಪಘಾತ; KSRTC ಬಸ್​​ಗೆ ಗುದ್ದಿದ ಕಾರು, ಐವರು ಸ್ಥಳದಲ್ಲಿಯೇ ಸಾವು

ಮಹಾ ಶಿವರಾತ್ರಿಯಂದೇ ಘೋರ ಘಟನೆ ನಡೆದಿದ್ದು, ನೆಲಮಂಗಲ ಜಿಂದಾಲ್ ಬಳಿ KSRTC ಬಸ್​​ ಮತ್ತು ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಐವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಇಂಡಿಕಾ ಕಾರಿನಲ್ಲಿದ್ದ ಐವರು ದುರ್ಮರಣ ಹೊಂದಿದ್ದು, ದೊಡ್ಡಬಳ್ಳಾಪುರದ ಹರ್ಷಿತ್, ನಿಖಿತ್ ಸೇರಿ ಇತರರು ಮೃತ ದುರ್ದೈವಿಗಳಾಗಿದ್ದಾರೆ.

ನೆಲಮಂಗಲ: ಮಹಾ ಶಿವರಾತ್ರಿಯಂದೇ ಘೋರ ಘಟನೆ ನಡೆದಿದ್ದು, ನೆಲಮಂಗಲ ಜಿಂದಾಲ್ ಬಳಿ KSRTC ಬಸ್​​ ಮತ್ತು ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಐವರು ಸ್ಥಳದಲ್ಲಿಯೇ (Accident) ಮೃತಪಟ್ಟಿದ್ದಾರೆ. ಇಂಡಿಕಾ ಕಾರಿನಲ್ಲಿದ್ದ ಐವರು ದುರ್ಮರಣ ಹೊಂದಿದ್ದು, ದೊಡ್ಡಬಳ್ಳಾಪುರದ ಹರ್ಷಿತ್, ನಿಖಿತ್ ಸೇರಿ ಇತರರು ಮೃತ ದುರ್ದೈವಿಗಳಾಗಿದ್ದಾರೆ. ತುಮಕೂರು ಕಡೆಯಿಂದ ಬರುತ್ತಿದ್ದ ಕಾರು ಡಿವೈಡರ್​​ ಜಂಪ್ ಮಾಡಿ ಬೆಂಗಳೂರು ಕಡೆಯಿಂದ ಹೊರಟಿದ್ದ (ಕೆಸ್‌ಆರ್‌ಟಿಸಿ) KSRTC ಬಸ್​ಗೆ ಡಿಕ್ಕಿಯಾಗಿದ್ದು, ನೆಲಮಂಗಲ ಸರ್ಕಾರಿ ಆಸ್ಪತ್ರೆಗೆ ಐವರ ಮೃತದೇಹ ರವಾನೆ ಮಾಡಲಾಗಿದೆ.

ಘಟನೆ ಸಂಬಂಧ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ. ಮೃತ ಹರ್ಷಿತ್​​ ರಾಜನಕುಂಟೆ ಸಾಯಿ ವಿದ್ಯಾ ಕಾಲೇಜಿನ ವಿದ್ಯಾರ್ಥಿಯಾಗಿದ್ದು, ದ್ವಿತೀಯ ವರ್ಷದ ಡಿಗ್ರಿ ಓದುತ್ತಿದ್ದ ಎಂಬ ಮಾಹಿತಿ ಸಿಕ್ಕಿದೆ. ಅಪಘಾತದ ರಭಸಕ್ಕೆ ಸ್ಥಳದಲ್ಲೇ ನಾಲ್ವರು ಮೃತಪಟ್ಟಿದ್ದರೆ, ಗಂಭೀರ ಗಾಯಗೊಂಡಿದ್ದ ಕಾರು ಚಾಲಕನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಆತನೂ ಪ್ರಾಣ ಬಿಟ್ಟಿದ್ದಾನೆ. ಮೃತರಲ್ಲಿ ಮೂವರ ಗುರುತು ಇನ್ನೂ ಪತ್ತೆಯಾಗಿಲ್ಲ ಎಂದು ತಿಳಿದು ಬಂದಿದೆ.

ಮೃತ ಹರ್ಷಿತ್​​ ರಾತ್ರಿ 8.30ರ ವರೆಗೂ ಮನೆಯಲ್ಲಿಯೇ ಇದ್ದ. ಬಳಿಕ ಸ್ನೇಹಿತನ ಭೇಟಿಗೆ ಎಂದು ತೆರಳಿದ್ದ ಎನ್ನಲಾಗಿದೆ. ತುಮಕೂರು ಕಡೆಯಿಂದ ಬೆಂಗಳೂರಿನತ್ತ ಕಾರಿನಲ್ಲಿ ಐವರು ಬರುತ್ತಿದ್ದಾಗ ಅಪಘಾತ ನಡೆದಿದ್ದು, ಕಾರು ಗುದ್ದಿದ ಪರಿಣಾಮ ಬಸ್​​ ಮುಂಭಾಗ ಜಖಂ ಆಗಿದ್ದರೆ, ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ.

ಶುಕ್ರವಾರ ಹೊಸಕೋಟೆ ತಾಲೂಕಿನ ಎಂ ಸತ್ಯವರ ಗ್ರಾಮದ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿ ಏಳು ಜನ ದುರ್ಮರಣ ಹೊಂದಿದ್ದರು. ಹೊಸಕೋಟೆ–ದಾಬಸ್‌ಪೇಟೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಕ್ಯಾಂಟರ್ ವಾಹನ, ಬೈಕ್ ಹಾಗೂ ಎಕ್ಸ್ ​ಯುವಿ ಕಾರಿನ ನಡುವೆ ಸರಣಿ ಡಿಕ್ಕಿ ಸಂಭವಿಸಿದ ಪರಿಣಾಮ ಸ್ಥಳದಲ್ಲೇ ಕಾರಿನಲ್ಲಿದ್ದ ಆರು ಮಂದಿ ಮತ್ತು ಬೈಕ್ ಸವಾರ ಪ್ರಾಣ ಬಿಟ್ಟಿದ್ದರು.

ಅತಿವೇಗವೇ ಅಪಘಾತಕ್ಕೆ ಕಾರಣ ಎಂಬುದಾಗಿ ಮೇಲ್ನೋಟಕ್ಕೆ ಕಂಡುಬರುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಹೆದ್ದಾರಿಯಲ್ಲಿ ಸಾಗುತ್ತಿದ್ದ ಎಕ್ಸ್ ​ಯುವಿ ಕಾರು ಮೊದಲು ಮುಂದೆ ಹೋಗುತ್ತಿದ್ದ ಬೈಕ್‌ಗೆ ಡಿಕ್ಕಿ ಹೊಡೆದಿದ್ದು, ಬಳಿಕ ನಿಯಂತ್ರಣ ತಪ್ಪಿ ಕ್ಯಾಂಟರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಮೃತಪಟ್ಟವರಲ್ಲಿ ಆರು ಮಂದಿ ಬೆಂಗಳೂರಿನ ಕೊತ್ತನೂರು ಮೂಲದವರು ಎಂದು ತಿಳಿದುಬಂದಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Be the first to comment

Leave a Reply

Your email address will not be published. Required fields are marked *

ad image