
ಗುವಾಹಟಿ: ಅಸ್ಸಾಂನ ಗುವಾಹಟಿಯಲ್ಲಿರುವ ಕಾಮಾಕ್ಯ ದೇಗುಲಕ್ಕೆ (Kamakhya Temple) ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಭೇಟಿ ನೀಡಿ, ಪೂಜೆ ಸಲ್ಲಿಸಿದ್ದಾರೆ.
ಎಐಸಿಸಿ ಪ್ರಧಾನ ಕಾರ್ಯದರ್ಶಿ, ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ (Priyanka Gandhi Vadra) ಜೊತೆ ಕಾಮಾಕ್ಯ ದೇಗುಲಕ್ಕೆ ಭೇಟಿ ನೀಡಿ, ಪೂಜೆ ಸಲ್ಲಿಸಿದರು.
ಈ ಕುರಿತು ಡಿಸಿಎಂ ಡಿಕೆ ಶಿವಕುಮಾರ್ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದು, ಶ್ರೀಮತಿ ಪ್ರಿಯಾಂಕಾ ಗಾಂಧಿ ಅವರೊಂದಿಗಿಂದು (ಫೆ.19) ಅಸ್ಸಾಂನ ಗುವಾಹಟಿಯಲ್ಲಿರುವ ಪವಿತ್ರ ಕಾಮಾಕ್ಯ ದೇವಾಲಯಕ್ಕೆ ಭೇಟಿ ನೀಡಿದೆವು. ತಾಯಿ ಕಾಮಾಕ್ಯ ಆಶೀರ್ವಾದವು ಎಲ್ಲರಿಗೂ ಶಕ್ತಿ ಮತ್ತು ಸಮೃದ್ಧಿ ನೀಡಲಿ ಎಂದು ಪಾರ್ಥಿಸಿದ್ದಾರೆ.






Be the first to comment
Leave a Reply