Bagalkote : ಶಿವಾಜಿ ಮೆರವಣಿಗೆ ವೇಳೆ ಕಲ್ಲು ತೂರಾಟ.. ಬಾಗಲಕೋಟೆ ಧಗಧಗ

ಆಘಾತಕಾರಿ ಬೆಳವಣಿಗೆಯೊಂದರಲ್ಲಿ ಬಾಗಲಕೋಟೆಯಲ್ಲಿ ನಡೆದ ಶಿವಾಜಿ ಜಯಂತಿ ಮೆರವಣಿಗೆ ಸಂದರ್ಭದಲ್ಲಿ, ಕಿಡಿಗೇಡಿಗಳು ಶಿವಾಜಿ ಭಾವಚಿತ್ರದ ಮೇಲೆ ಚಪ್ಪಲಿ ಎಸೆದು ಕಲ್ಲು ತೂರಾಟ ನಡೆಸಿದ್ದಾರೆ. ಶಾಂತವಾಗಿ ಸಾಗುತ್ತಿದ್ದ ಮೆರವಣಿಗೆ ಮೇಲೆ ಏಕಾಏಕಿ ಕಲ್ಲು ತೂರಾಟ ನಡೆಸಲಾಗಿದ್ದು, ಈ ವೇಳೆ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಸಿದ್ಧಾರ್ಥ್‌ ಗೋಯಲ್‌ ಅವರ ತಲೆಗೆ ಪೆಟ್ಟು ಬಿದ್ದಿದೆ. ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ಮುಂಜಾಗ್ರತಾ ಕ್ರಮವಾಗಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಈ ಕುರಿತ ಕಂಪ್ಲೀಟ್ ರಿಪೋರ್ಟ್ ಇಲ್ಲಿದೆ ನೋಡಿ.

ಶಿವಾಜಿ ಮೆರವಣಿಗೆ ವೇಳೆ ಕಲ್ಲು ತೂರಾಟ.. ಬಾಗಲಕೋಟೆ ಧಗಧಗ
SP ಸಿದ್ಧಾರ್ಥ್‌ ಗೋಯಲ್‌ ತಲೆಗೆ ಕಲ್ಲೇಟು.. 3 ಕಡೆ ನಿಷೇಧಾಜ್ಞೆ ಜಾರಿ

ಶಿವಾಜಿ ಭಾವಚಿತ್ರ ಮೆರವಣಿಗೆ ವೇಳೆ ದುಷ್ಕರ್ಮಿಗಳು ಕಲ್ಲು, ಚಪ್ಪಲಿ ತೂರಾಟ ನಡೆಸಿರುವ ಘಟನೆ ಬಾಗಲಕೋಟೆಯ ಕಿಲ್ಲಾ ಓಣಿಯಲ್ಲಿ ನಡೆದಿದೆ. ಘಟನೆಯಲ್ಲಿ SP ಸಿದ್ಧಾರ್ಥ್‌ ಗೋಯಲ್‌ ತಲೆಗೆ ಕಲ್ಲೇಟು ಬಿದ್ದಿದೆ. ಕಲ್ಲು-ಚಪ್ಪಲಿ ತೂರಾಟದ ಬಳಿಕ ಕಿಡಿಗೇಡಿಗಳು ತಳ್ಳುವ ಗಾಡಿಗಳಿಗೂ ಬೆಂಕಿ ಹಚ್ಚಿದ್ದಾರೆ. ಕಲ್ಲು ತೂರಾಟ ಹಿನ್ನೆಲೆಯಲ್ಲಿ ಸ್ಥಳದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ. ಘಟನೆ ನಡೆದ ಮರು ಕ್ಷಣವೇ ಜನರನ್ನು ಚದುರಿಸಿ ಪೊಲೀಸರು ಪರಿಸ್ಥಿತಿ ತಿಳಿಗೊಳಿಸುವ ಯತ್ನ ಮಾಡಿದ್ದು, ಮುಂಜಾಗೃತಾ ಕ್ರಮವಾಗಿ ಪಂಕಾ ಮಸೀದಿ ಮತ್ತು ಕೊತ್ತಲೇಶ್ವರ ದೇಗುಲ ಬಳಿ ಹೆಚ್ಚಿನ ಭದ್ರತೆ ಒದಗಿಸಲಾಗಿದೆ. ಯಾವುದೇ ಅನಾಹುತ ನಡೆಯದಂತೆ ನೋಡಿಕೊಳ್ಳಲು ಪೊಲೀಸ್ ಸಿಬ್ಬಂದಿ ಸ್ಥಳದಲ್ಲಿಯೇ ಬೀಡುಬಿಟ್ಟಿದ್ದಾರೆ.

ಕಲ್ಲು ತೂರಾಟ ನಡೆದ ವೇಳೆ ಎಸ್ಪಿ ಸಿದ್ದಾರ್ಥ್ ಗೋಯಲ್ ಸ್ಥಳದಲ್ಲೇ ಇದ್ದರು. ಅವರ ಮೇಲೂ ಕಲ್ಲುಗಳು ಬಿದ್ದಿವೆ. ಘಟನೆ ಬಗ್ಗೆ ಎಸ್ಪಿ ಸಿದ್ದಾರ್ಥ್ ಗೋಯಲ್ ಮಾಹಿತಿ ನೀಡಿದ್ದಾರೆ. ಮೆರವಣಿಗೆ ಸ್ವಲ್ಪ ದೂರ ಇತ್ತು. ಆಗ ಎರಡು ಕಲ್ಲು ಬಂದವು, ಯಾವ ಕಡೆಯಿಂದ ಬಂತು ಅಂತ ಚೆಕ್ ಮಾಡ್ತಿದ್ದೇವೆ. ಸದ್ಯಕ್ಕೆ ಪರಿಸ್ಥಿತಿ ಹತೋಟಿಗೆ ಬಂದಿದೆ. ಕಲ್ಲು ತೂರಾಟ ಸಂಬಂಧ ಪ್ರಕರಣ ದಾಖಲು ಮಾಡಲಾಗಿದ್ದು, ವಿಡಿಯೋ ಚೆಕ್ ಮಾಡಿ ಕಠಿಣ ಕ್ರಮ ತೆಗೆದುಕೊಳ್ಳೋದಾಗಿ ಎಸ್ಪಿ ತಿಳಿಸಿದ್ದಾರೆ

ಸಿದ್ದಾರ್ಥ್ ಗೋಯಲ್, SP   

ಕಲ್ಲು, ಚಪ್ಪಲಿ ತೂರಾಟ ಹಿನ್ನೆಲೆಯಲ್ಲಿ ಫೆಬ್ರವರಿ 24ರ ಮಧ್ಯರಾತ್ರಿವರೆಗೆ ಹಳೆ ಬಾಗಲಕೋಟೆ, ನವನಗರ, ವಿದ್ಯಾಗಿರಿಯಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಸಾರ್ವಜನಿಕ ಸ್ಥಳದಲ್ಲಿ 4 ಕ್ಕಿಂತ ಹೆಚ್ಚು ಜನ ಸೇರಿ‌ ತಿರುಗಾಡುವಂತಿಲ್ಲ.ಅಪಾಯಕಾರಿ ಶಸ್ತ್ರಾಸ್ತ್ರ ಹಿಡಿದು ಓಡಾಡುವುದು, ಸುರಕ್ಷತೆಗೆ ಧಕ್ಕೆ ತರುವಂತ ಯಾವುದೇ ಚಟುವಟಿಕೆ ಮತ್ತು ಅನುಮತಿ ಇಲ್ಲದೆ ಯಾವುದೇ ಸಭೆ ಸಮಾರಂಭ ನಡೆಸುವುದು, ಧರಣಿ ನಡೆಸುವುದನ್ನು ನಿಷೇಧಿಸಲಾಗಿರೋದಾಗಿ ಆದೇಶ ಹೊರಡಿಸಲಾಗಿದೆ.

ಒಟ್ಟಿನಲ್ಲಿ ಪಂಕಾ ಮಸೀದಿ ಒಳಗಿಂದ ಚಪ್ಪಲಿಯನ್ನ ಎಸೆಯಲಾಗಿದೆ ಎಂಬ ಆರೋಪ ಇದೆ. ಪರಿಸ್ಥಿತಿ ಬಿಗಾಡಾಯಿಸುತ್ತಿದ್ದಂತೆ ಪೊಲೀಸರು ಪರಿಸ್ಥಿತಿಯನ್ನ ನಿಯಂತ್ರಿಸಿದ್ದಾರೆ.

Be the first to comment

Leave a Reply

Your email address will not be published. Required fields are marked *

ad image