ಕೆಪಿಸಿಸಿ ಅಧ್ಯಕ್ಷರಾಗಿ 6 ವರ್ಷ: ಮಾರ್ಚ್ 10ರಂದು ಡಿಸಿಎಂ ಡಿಕೆ ಶಿವಕುಮಾರ್‌ ಡಿನ್ನರ್ ಪಾರ್ಟಿ

ಸಿಎಂ ಸಿದ್ದರಾಮಯ್ಯ, ಸಚಿವರು ಹಾಗೂ ಪಕ್ಷದ ಶಾಸಕರಿಗೆ ಡಿಸಿಎಂ ಡಿಕೆ ಶಿವಕುಮಾರ್ ಅಹ್ವಾನ ನೀಡಿದ್ದಾರೆ. ಈ ಡಿನ್ನರ್ ಪಾರ್ಟಿ ಆಯೋಜನೆ ಮೂಲಕ ಶಾಸಕರಲ್ಲಿ ವಿಶ್ವಾಸ ಹಚ್ಚಿಸಿಕೊಳ್ಳಲು ಮುಂದಾಗಿದ್ದಾರೆ ಎಂದು ಹೇಳಲಾಗುತ್ತಿದೆ. ಹೈಕಮಾಂಡ್‌ ನಾಯಕರು ಕೂಡ ಈ ಪಾರ್ಟಿಗೆ ಬರುವ ಸಾಧ್ಯತೆ ಇದೆ.

ಬೆಂಗಳೂರು, ಮಾರ್ಚ್‌ 03 : ಕೆಪಿಸಿಸಿ ಅಧ್ಯಕ್ಷರಾಗಿ (KPCC president) ಆರು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಮಾರ್ಚ್ 10ರಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್  ಪಕ್ಷದ ಎಲ್ಲಾ ಶಾಸಕರಿಗೆ ಡಿನ್ನರ್ ಪಾರ್ಟಿ ಆಯೋಜನೆ ಮಾಡಿದ್ದಾರೆ. ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ಡಿಕೆ ಶಿವಕುಮಾರ್ ಈ ಒಂದು ಔತಣಕೂಟ ಏರ್ಪಡಿಸಿದ್ದಾರೆ ಎಂದು ತಿಳಿದುಬಂದಿದೆ.

ಸಿಎಂ ಸಿದ್ದರಾಮಯ್ಯ, ಸಚಿವರು ಹಾಗೂ ಪಕ್ಷದ ಶಾಸಕರಿಗೆ ಡಿಸಿಎಂ ಡಿಕೆ ಶಿವಕುಮಾರ್ ಅಹ್ವಾನ ನೀಡಿದ್ದಾರೆ. ಈ ಡಿನ್ನರ್ ಪಾರ್ಟಿ ಆಯೋಜನೆ ಮೂಲಕ ಶಾಸಕರಲ್ಲಿ ವಿಶ್ವಾಸ ಹಚ್ಚಿಸಿಕೊಳ್ಳಲು ಮುಂದಾಗಿದ್ದಾರೆ ಎಂದು ಹೇಳಲಾಗುತ್ತಿದೆ. ಹೈಕಮಾಂಡ್‌ ನಾಯಕರು ಕೂಡ ಈ ಪಾರ್ಟಿಗೆ ಬರುವ ಸಾಧ್ಯತೆ ಇದೆ.

Be the first to comment

Leave a Reply

Your email address will not be published. Required fields are marked *

ad image