
ಬಿಜೆಪಿ ನಾಯಕರು ಸೇರಿದಂತೆ ಹಲವರು ಬೆಂಬಲ ನೀಡಿದ್ದಾರೆ. ಆದ್ರೆ, ಬಿಜೆಪಿ ನಾಯಕರಿಗೆ ಪ್ರತಿಭಟನಾಕಾರರು ತರಾಟೆಗೆ ತೆಗೆದುಕೊಂಡಿದ್ದಾರೆ. ನೀವು ರಾಜಕೀಯ ಮಾಡಲು ಬರಬೇಡಿ ಎಂದು ಗೋ ಬ್ಯಾಕ್ ಘೋಷಣೆ ಕೂಗಿದ್ದಾರೆ. ವಿರೋಧದ ಮಧ್ಯೆಯು ಬಿಜೆಪಿ ನಾಯಕರು ವಿದ್ಯಾರ್ಥಿಗಳ ಬೆಂಬಲಕ್ಕೆ ನಿಂತಿದ್ದಾರೆ.
ಧಾರವಾಡದಲ್ಲಿ (Dharwad) ನಡೆಯುತ್ತಿರುವ ಉದ್ಯೋಗಾಕಾಂಕ್ಷಿಗಳ ಹೋರಾಟ ತೀವ್ರಗೊಂಡಿದೆ. ಖಾಲಿ ಹುದ್ದೆಗಳ ನೇಮಕ (Recruitment) ಮತ್ತು ವಯೋಮಿತಿ ಸಡಿಲಿಕೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಇಟ್ಟು ದೊಡ್ಡ ಪ್ರತಿಭಟನೆ (Protest) ನಡೆಸುತ್ತಿದ್ದಾರೆ. ಸಾವಿರಾರು ವಿದ್ಯಾರ್ಥಿಗಳಿಂದ ರಾಜ್ಯ ಸರ್ಕಾರದ (Government) ವಿರುದ್ಧ ಘೋಷಣೆ ಕೂಗಿದ್ದು, ಖಾಲಿ ಹುದ್ದೆ ನೇಮಕ ಮಾಡುವಂತೆ ಆಗ್ರಹಿಸಿದ್ದಾರೆ. ಪ್ರತಿಭಟನೆಯಲ್ಲಿ ಬಿಜೆಪಿ ನಾಯಕರು (BJP Leaders) ಸೇರಿದಂತೆ ಹಲವರು ಬೆಂಬಲ ನೀಡಿದ್ದಾರೆ. ಆದ್ರೆ, ಬಿಜೆಪಿ ನಾಯಕರಿಗೆ ಪ್ರತಿಭಟನಾಕಾರರು ತರಾಟೆಗೆ ತೆಗೆದುಕೊಂಡಿದ್ದಾರೆ. ನೀವು ರಾಜಕೀಯ ಮಾಡಲು ಬರಬೇಡಿ ಎಂದು ಗೋ ಬ್ಯಾಕ್ ಘೋಷಣೆ ಕೂಗಿದ್ದಾರೆ. ವಿರೋಧದ ಮಧ್ಯೆಯು ಬಿಜೆಪಿ ನಾಯಕರು ವಿದ್ಯಾರ್ಥಿಗಳ ಬೆಂಬಲಕ್ಕೆ ನಿಂತಿದ್ದಾರೆ.
ಉದ್ಯೋಗಾಕಾಂಕ್ಷಿಗಳ ಆಕ್ರೋಶದ ಕಿಚ್ಚು!
ಖಾಲಿ ಇರುವ ಸರ್ಕಾರಿ ಹುದ್ದೆಗಳ ನೇಮಕಾತಿಗಾಗಿ ಧಾರವಾಡದಲ್ಲಿ ಸಾವಿರಾರು ವಿದ್ಯಾರ್ಥಿಗಳು ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ. ಧಾರವಾಡದ ಶ್ರೀನಗರ ವೃತ್ತದಲ್ಲಿ ಆರಂಭವಾದ ಉದ್ಯೋಗಾಕಾಂಕ್ಷಿಗಳ ಪ್ರತಿಭಟನೆ ಜ್ಯುಬಿಲಿ ವೃತ್ತಕ್ಕೆ ಆಗಮಿಸಿದೆ. ಸರ್ಕಾರದ ಉದ್ಯೋಗಾಕಾಂಕ್ಷಿಗಳು ಮತ್ತು ವಿದ್ಯಾರ್ಥಿಗಳು ಕೈಯಲ್ಲಿ ಬೋರ್ಡ್ ಹಿಡಿದು ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿ ಸೇರಿದಂತೆ ಹಲವರ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬಿಜೆಪಿ ನಾಯಕರಿಗೆ ಗೋ ಬ್ಯಾಕ್ ಎಂದು ಘೋಷಣೆ
ಸರ್ಕಾರದ ವಿರುದ್ಧ ಉದ್ಯೋಗಾಕಾಂಕ್ಷಿಗಳ ಹೋರಾಟಕ್ಕೆ ಬಿಜೆಪಿ ನಾಯಕರು ಬೆಂಬಲ ಸೂಚಿಸಿದ್ದಾರೆ. ಈ ಹಿನ್ನೆಲೆ ಪ್ರತಿಭಟನೆಯಲ್ಲಿ ವಿಪಕ್ಷ ನಾಯಕ ಆರ್.ಅಶೋಕ್ ಮತ್ತು ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣ ಸ್ವಾಮಿ ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ್ದರು. ಈ ವೇಳೆ ಬಿಜೆಪಿ ನಾಯಕರಿಗೆ ಪ್ರತಿಭಟನಾಕಾರರು ತರಾಟೆಗೆ ತೆಗೆದುಕೊಂಡಿದ್ದಾರೆ. ಛಲವಾದಿ ನಾರಾಯಣ ಸ್ವಾಮಿ ಭಾಷಣಕ್ಕೆ ವಿರೋಧ ವ್ಯಕ್ತಪಡಿಸಿ ವಾಪಸ್ ಹೋಗುವಂತೆ ಪ್ರತಿಭಟನಾಕಾರರು ಆಗ್ರಹಿಸಿದರು
ನೀವು ರಾಜಕೀಯ ಮಾಡಲು ಬರಬೇಡಿ ಎಂದ ಪ್ರತಿಭಟನಾಕಾರರು, ಬಿಜೆಪಿ ನಾಯಕರ ವಿರುದ್ಧ ಗೋ ಬ್ಯಾಕ್ ಎಂದು ಘೋಷಣೆ ಕೂಗಿದ್ದಾರೆ. ಆರ್. ಅಶೋಕ್, ಛಲವಾದಿ ನಾರಾಯಣಸ್ವಾಮಿ, ಅರವಿಂದ ಬೆಲ್ಲದ್ ಅವರಿಗೆ ಗೋ ಬ್ಯಾಕ್ ಎಂದು ಪ್ರತಿಭಟನಾಕಾರರು ಘೋಷಣೆ ಕೂಗಿದ್ದಾರೆ. ಉದ್ಯೋಗಾಕಾಂಕ್ಷಿಗಳ ವಿರೋಧದ ಮಧ್ಯೆಯೂ ಬಿಜೆಪಿ ನಾಯಕರ ಭಾಷಣ, ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಬೇಕು ಎಂದು ಆಗ್ರಹಿಸಿದ್ದಾರೆ.
ಮನವಿ ಪಡೆಯಲು ಸಚಿವರು ಬರುವಂತೆ ಪಟ್ಟು

ಇನ್ನು, ನಗರ ಜ್ಯೂಬ್ಲಿ ಸರ್ಕಲ್ನಲ್ಲಿರುವ ಸಾವಿರಾರು ಪ್ರತಿಭಟನಾಕಾರರು, ಕಾಂಗ್ರೆಸ್ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ಹೊರಹಾಕಿದ್ದಾರೆ. ಅಲ್ಲದೇ ಮನವಿ ಪಡೆಯಲು ಸಚಿವರು ಬರುವವರೆಗೂ ಸ್ಥಳದಿಂದ ಹೋಗಲ್ಲ ಎಂದು ಬಿಗಿ ಪಟ್ಟು ಹಿಡಿದು ಕುಳಿತಿದ್ದಾರೆ.
ರಾಜ್ಯ ಸರ್ಕಾರದ ವಿರುದ್ಧ ಬಿವೈ ವಿಜಯೇಂದ್ರ ಕಿಡಿ
ಇನ್ನು ಧಾರವಾಡದಲ್ಲಿ ನಡೆಯುತ್ತಿರುವ ಉದ್ಯೋಗಾಕಾಂಕ್ಷಿಗಳ ಪ್ರತಿಭಟನೆ ಸಂಬಂಧಪಟ್ಟಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಮಾತನಾಡಿರುವ ಅವರು, ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದಲೇ ಒಂದೇ ಒಂದು ಹುದ್ದೆ ಭರ್ತಿ ಮಾಡಿಲ್ಲ. ಸಿಎಂ ಆಗಲಿ, ಸಚಿವರು ಆಗಲಿ ರಾಜ್ಯಾದ್ಯಂತ ಭಾಷಣ ಬಿಗಿಯುತ್ತಿದ್ದಾರೆ ಅಷ್ಟೇ. ಆದರೆ ವಿದ್ಯಾರ್ಥಿಗಳಿಗೆ ನ್ಯಾಯ ಅಂತೂ ಕೊಟ್ಟಿಲ್ಲ. ಯುವ ಜನತೆ ಜೀವನದಲ್ಲಿ ಸಿಎಂ, ಡಿಸಿಎಂ ಚೆಲ್ಲಾಟ ಆಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.




Be the first to comment
Leave a Reply