DK Shivakumar: ‘ಇಕ್ಬಾಲ್ ಹುಸೇನ್ ಬಾಯಿ ಮುಚ್ಚಿಕೊಂಡು ಇರಬೇಕು!’ ಗರಂ ಆಗಿದ್ಯಾಕೆ ಡಿಕೆಶಿ?

Avatar photo

DK Shivakumar: ರಾಮನಗರ ಶಾಸಕ ಇಕ್ಬಾಲ್ ಹುಸೇನ್ ವಿರುದ್ಧ ಡಿಸಿಎಂ ಡಿಕೆ ಶಿವಕುಮಾರ್ ಮತ್ತೊಮ್ಮೆ ಗರಂ ಆಗಿದ್ದಾರೆ. ಇಕ್ಬಾಲ್ ಹುಸೇನ್ ಬಾಯಿ ಮುಚ್ಚಿಕೊಂಡು ಇರಬೇಕು ಅಂತ ಖಡಕ್ ಆಗಿ ವಾರ್ನಿಂಗ್ ಕೊಟ್ಟಿದ್ದಾರೆ.

 

ಕಾರವಾರ, ಉತ್ತರ ಕನ್ನಡ: ರಾಮನಗರ ಕಾಂಗ್ರೆಸ್ ಶಾಸಕ (Rama nagara Congress MLA) ಇಕ್ಬಾಲ್ ಹುಸೇನ್ ವಿರುದ್ಧ ಡಿಸಿಎಂ ಡಿಕೆ ಶಿವಕುಮಾರ್ (DCM DK Shivakumar) ಮತ್ತೊಮ್ಮೆ ಗರಂ ಆಗಿದ್ದಾರೆ. ಡಿಕೆ ಶಿವಕುಮಾರ್ ಡಿಸಿಎಂ ಆಗಬೇಕು ಅಂತ ಪದೇ ಪದೇ ಒತ್ತಾಯ ಮಾಡುತ್ತಿದ್ದ ಇಕ್ಬಾಲ್ ಹುಸೇನ್ (Iqbal Hussain), ಸಿಎಂ (CM) ಹುದ್ದೆ ಬಗ್ಗೆ ಚರ್ಚಿಸಲು ಡಿಕೆ ಶಿವಕುಮಾರ್‌ಗೆ ಹೈಕಮಾಂಡ್ ಬುಲಾವ್ ನೀಡಿದೆ ಅಂತ ಇಕ್ಬಾಲ್ ಹುಸೇನ್‌ ಹೇಳಿದ್ದರು. ಇದಕ್ಕೆ ಕಾರವಾರದಲ್ಲಿ (Karwar) ಪ್ರತಿಕ್ರಿಯಿಸಿದ ಡಿಸಿಎಂ ಡಿಕೆಶಿ, ಇಕ್ಬಾಲ್ ಹುಸೇನ್ ಬಾಯಿ ಮುಚ್ಚಿಕೊಂಡು ಇರಬೇಕು ಅಂತ ಖಡಕ್ ಆಗಿ ವಾರ್ನಿಂಗ್ ಕೊಟ್ಟಿದ್ದಾರೆ.

ಶಾಸಕ ಇಕ್ಬಾಲ್ ಹುಸೇನ್ ಹೇಳಿದ್ದೇನು?

ಮುಖ್ಯಮಂತ್ರಿ ಬದಲಾವಣೆ ವಿಚಾರವಾಗಿ ಕಾಂಗ್ರೆಸ್ ಹೈಕಮಾಂಡ್‌ನಿಂದ ಡಿಕೆ ಶಿವಕುಮಾರ್‌ಗೆ ಬುಲಾವ್ ಬಂದಿದೆ ಅಂತ ಇಕ್ಬಾಲ್ ಹುಸೇನ್ ಹೇಳಿದ್ದರು. ಇದೇ ಫೆಬ್ರವರಿ 22 ಅಥವಾ 26ರಂದು ಡಿಕೆ ಶಿವಕುಮಾರ್ ಅವರು ದೆಹಲಿಗೆ ತೆರಳಲಿದ್ದು, ಆ ಬಳಿಕ ಸಿಹಿ ಸುದ್ಧಿ ಸಿಗುವ ವಿಶ್ವಾಸವಿದೆ ಎಂದು ಶಾಸಕ ಇಕ್ಬಾಲ್ ಹುಸೇನ್ ಹೇಳಿದ್ದರು.

ಇಕ್ಬಾಲ್ ಹುಸೇನ್ ಬಾಯಿ ಮುಚ್ಚಿಕೊಂಡು ಇರಬೇಕು

ಶಾಸಕ ಇಕ್ಬಾಲ್ ಹುಸೇನ್ ಹೇಳಿಕೆ ವಿಚಾರಕ್ಕೆ ಕಾರವಾರದಲ್ಲಿ ಇಂದು ಪ್ರತಿಕ್ರಿಯೆ ನೀಡಿದ ಡಿಕೆ ಶಿವಕುಮಾರ್, ಇಕ್ಬಾಲ್ ಹುಸೇನ್ ಬಾಯಿ ಮುಚ್ಚಿಕೊಂಡು ಇರಬೇಕು ಅಂತ ಖಡಕ್ ವಾರ್ನಿಂಗ್ ಕೊಟ್ಟಿದ್ದಾರೆ.

Be the first to comment

Leave a Reply

Your email address will not be published. Required fields are marked *

ad image