ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್ ದಾಳಿ – ನಾಲ್ವರಿಗೆ ಗಾಯ

ದುಬೈ: ಇರಾನ್ ಮೇಲೆ ಇಸ್ರೇಲ್ (Israel) ಹಾಗೂ ಅಮೆರಿಕ ಜಂಟಿ ದಾಳಿ ನಡೆಸಿದ ಬೆನ್ನಲ್ಲೇ ಇರಾನ್ ಪ್ರತಿದಾಳಿ ಆರಂಭಿಸಿದ್ದು, ಗಲ್ಫ್‌ನಲ್ಲಿರುವ ಅಮೆರಿಕದ ಮಿಲಿಟರಿ ಸ್ಥಳಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಿದೆ. ಇದೀಗ ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ (Dubai International Airport) ಮೇಲೂ ಇರಾನ್ (Iran) ದಾಳಿ ನಡೆಸಿದೆ.

ಸದ್ಯ ಸಾಮಾಜಿಕ ಜಾಲತಾಣದಲ್ಲಿ ಈ ವೀಡಿಯೋ ಹರಿದಾಡುತ್ತಿದ್ದು, ದಾಳಿಯಲ್ಲಿ ನಾಲ್ವರು ಗಾಯಗೊಂಡಿದ್ದಾರೆ ಎಂದು ವರದಿಗಳು ತಿಳಿಸಿವೆ. ದುಬೈ ವಿಮಾನ ನಿಲ್ದಾಣವನ್ನು ನೇರವಾಗಿ ಗುರಿಯಾಗಿಸಿಕೊಂಡು ದಾಳಿ ನಡೆದಿದೆ ಎಂಬ ಕುರಿತು ಯಾವುದೇ ಅಧಿಕೃತ ಹೇಳಿಕೆಗಳು ಬಂದಿಲ್ಲ.

ದಾಳಿಯ ನಂತರ ವಿಮಾನ ನಿಲ್ದಾಣದ ಪ್ರಯಾಣಿಕರ ಲಾಂಜ್ ಭಾಗಕ್ಕೆ ಹಾನಿಯಾಗಿದೆ ಎಂದು ವರದಿಗಳು ಹೇಳಿವೆ. ವೀಡಿಯೋದಲ್ಲಿ ಸ್ಫೋಟದ ಶಬ್ದ ಕೇಳಿಬಂದಿದ್ದು, ದಟ್ಟಹೊಗೆ ಕಾಣಿಸಿಕೊಂಡ ಹಿನ್ನೆಲೆ ಪ್ರಯಾಣಿಕರು ಹೆದರಿ ಓಡುವ ದೃಶ್ಯಗಳು ಕಂಡುಬಂದಿದೆ.

ಸದ್ಯ ಯುನೈಟೆಡ್ ಅರಬ್ ಎಮಿರೇಟ್ಸ್‌ನ ವಿವಿಧ ಪ್ರದೇಶಗಳಲ್ಲಿ ತುರ್ತು ಎಚ್ಚರಿಕೆ ಸಂದೇಶಗಳನ್ನು ರವಾನಿಸಿದ್ದು, ನಿವಾಸಿಗಳು ಹಾಗೂ ಪ್ರವಾಸಿಗರು ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಸೂಚಿಸಲಾಗಿದೆ. ಕ್ಷಿಪಣಿ ದಾಳಿ ಹಿನ್ನೆಲೆ ಭದ್ರತೆಗಳನ್ನು ಹೆಚ್ಚಿಸಲಾಗಿದೆ ಎಂದು ತಿಳಿದು ಬಂದಿದೆ.

 

Be the first to comment

Leave a Reply

Your email address will not be published. Required fields are marked *

ad image