
ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಇಂದು 84ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಹುಟ್ಟುಹಬ್ಬ ಹಿನ್ನೆಲೆ, ಶಿವಮೊಗ್ಗದ ಶಿಕಾರಿಪುರದಲ್ಲಿ ಇಂದು ಬಿಎಸ್ವೈ ಬೆಳಗ್ಗೆಯಿಂದ ಸಂಜೆಯವರೆಗೂ ಸಾಲು ಸಾಲು ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ. ಮೊದಲಿಗೆ ತಮ್ಮ ತವರು ಕ್ಷೇತ್ರ ಶಿಕಾರಿಪುರದಲ್ಲಿ 3 ದೇವಾಲಯಗಳಿಗೆ ಭೇಟಿ ನೀಡಲಿದ್ದು, ಬಳಿಕ ಶ್ರೀ ವೆಂಕಟೇಶ್ವರ ಸ್ವಾಮಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಲಿದ್ದಾರೆ. ಮಧ್ಯಾಹ್ನ ಶಿಕಾರಿಪುರದ ಕುಮದ್ವತಿ ಕಾಲೇಜು ಆವರಣದ ವೇದಿಕೆ ಕಾರ್ಯಕ್ರಮದಲ್ಲಿ ಬಿಜೆಪಿಯ ಎಲ್ಲಾ ನಾಯಕರು ಬಿಎಸ್ವೈಗೆ ಶುಭ ಕೋರಲಿದ್ದಾರೆ. ಸಂಜೆ ಅದೇ ಕಾಲೇಜು ಆವರಣದಲ್ಲಿ ಸಂಗೀತ ಸಂಜೆ ಕಾರ್ಯಕ್ರಮ ಆಯೋಜನೆ ಮಾಡಲಾಗಿದ್ದು, ಖ್ಯಾತ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಹಾಗೂ ಖ್ಯಾತ ಗಾಯಕಿ ಮಂಗ್ಲಿ ತಂಡದಿಂದ ಸಂಗೀತ ರಸಸಂಜೆ ನಡೆಯಲಿದೆ.






Be the first to comment
Leave a Reply