
ಢಾಕಾ: ಬಾಂಗ್ಲಾದೇಶದ ಸಾರ್ವತ್ರಿಕ ಚುನಾವಣೆ ಹೊತ್ತಲ್ಲೇ ಮತ್ತೊಬ್ಬ ಹಿಂದೂ ವ್ಯಕ್ತಿಯನ್ನು ಹತ್ಯೆ ಮಾಡಿರುವ ಘಟನೆ ನಡೆದಿದೆ. ಬಾಂಗ್ಲಾದೇಶದ ಮೌಲ್ವಿಬಜಾರ್ ಜಿಲ್ಲೆಯಲ್ಲಿ ಉದ್ವಿಗ್ನತೆ ಭುಗಿಲೆದ್ದಿದೆ. 28 ವರ್ಷದ ಹಿಂದೂ ವ್ಯಕ್ತಿಯೊಬ್ಬನನ್ನು ಕ್ರೂರವಾಗಿ ಹತ್ಯೆ ಮಾಡಲಾಗಿದೆ. ಕೈಕಾಲುಗಳನ್ನು ಕಟ್ಟಿಹಾಕಿದ ಸ್ಥಿತಿಯಲ್ಲಿ ಆತನ ದೇಹವು ಪತ್ತೆಯಾಗಿದ್ದು, ಅಲ್ಪಸಂಖ್ಯಾತರ ಸುರಕ್ಷತೆಯ ಬಗ್ಗೆ ಮತ್ತೆ ಆತಂಕ ಮೂಡಿದೆ. ಮೃತರನ್ನು ರತನ್ ಸಾಹುಕರ್ ಎಂದು ಗುರುತಿಸಲಾಗಿದೆ. ರತನ್ ಚಂಪಾ ಪ್ರದೇಶದ ಚಹಾ ತೋಟಗಳಲ್ಲಿ ಕೆಲಸ ಮಾಡುತ್ತಿದ್ದರು. ರತನ್ ಅವರ ಕೈ ಮತ್ತು ಕಾಲು ಕಟ್ಟಿಹಾಕಲಾಗಿತ್ತು ಮತ್ತು ಅವರ ದೇಹದಲ್ಲಿ ತೀವ್ರ ಗಾಯಗಳಾಗಿದ್ದವು, ಅದರಿಂದ ವಿಪರೀತ ರಕ್ತಸ್ರಾವವೂ ಆಗುತ್ತಿತ್ತು.
ರತನ್ ಜೊತೆ ಕೆಲಸ ಮಾಡುತ್ತಿದ್ದ ಕಾರ್ಮಿಕರು ಇದು ಪೂರ್ವನಿಯೋಜಿತ ಕೊಲೆ ಎಂದು ಸ್ಪಷ್ಟವಾಗಿ ಹೇಳಿದ್ದಾರೆ. ಇದೊಂದೇ ಘಟನೆಯಲ್ಲ. ಕೆಲವು ದಿನಗಳ ಹಿಂದೆ, ಮೈಮೆನ್ಸಿಂಗ್ ಜಿಲ್ಲೆಯಲ್ಲಿ ಮತ್ತೊಬ್ಬ ಹಿಂದೂ ಉದ್ಯಮಿ ಸುಶೇನ್ ಚಂದ್ರ ಸರ್ಕಾರ್ (62) ಅವರನ್ನು ಕ್ರೂರವಾಗಿ ಹತ್ಯೆ ಮಾಡಲಾಗಿತ್ತು ಪ್ರಸ್ತುತ, ಮೊಹಮ್ಮದ್ ಯೂನಸ್ ನೇತೃತ್ವದ ಮಧ್ಯಂತರ ಸರ್ಕಾರ ದೇಶವನ್ನು ನಡೆಸುತ್ತಿದೆ. ಮೊಹಮ್ಮದ್ ಯೂನಸ್ ಎಲ್ಲಾ ರಾಜಕೀಯ ಪಕ್ಷಗಳು ಮತ್ತು ಅಭ್ಯರ್ಥಿಗಳಿಗೆ ಶಾಂತಿಯನ್ನು ಕಾಪಾಡಿಕೊಳ್ಳಲು ಮತ್ತು ಪ್ರಜಾಪ್ರಭುತ್ವ ನಿಯಮಗಳನ್ನು ಅನುಸರಿಸಲು ಮನವಿ ಮಾಡಿದ್ದಾರೆ.






Be the first to comment
Leave a Reply