
ಬೆಂಗಳೂರು: ಬಿಕ್ಲು ಶಿವ ಕೊಲೆ ಕೇಸ್ನಲ್ಲಿ ಆರೋಪಿಯಾಗಿರುವ ಬೈರತಿ ಬಸವರಾಜ್ನನ್ನ ಕೊನೆಗೂ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸುಪ್ರೀಂ ಕೋರ್ಟ್ನಲ್ಲಿ ನಿರೀಕ್ಷಣಾ ಜಾಮೀನು ಅರ್ಜಿ ವಜಾ ಆದ ಹಿನ್ನೆಲೆ ಬಂಧನದ ಭೀತಿಯಿಂದ ಗುಜರಾತ್ ಅಹಮದಾಬಾದ್ನಲ್ಲಿ ತಲೆಮರೆಸಿಕೊಂಡಿದ್ದರು. ಅಹಮದಾಬಾದ್ನಿಂದ ಬೆಂಗಳೂರಿಗೆ ವಿಮಾನದಲ್ಲಿ ಆಗಮಿಸಿದ ಬೈರತಿ ಬಸವರಾಜ್ನನ್ನ ಲುಕ್ ಔಟ್ ನೋಟಿಸ್ ಹಿನ್ನೆಲೆ ಏರ್ಪೋರ್ಟ್ನಲ್ಲಿ ಸಿಐಡಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
ಫ್ಲೈಟ್ ಇಳಿದು ಹೊರ ಬರ್ತಿದ್ದಂತೆ ವಶಕ್ಕೆ
ಅಹಮದಾಬಾದ್ನಿಂದ ಇಂಡಿಗೋ 6E683 ವಿಮಾನದಲ್ಲಿ ದೇವನಹಳ್ಳಿ ಬಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಶಾಸಕ ಬೈರತಿ ಬಸವರಾಜ್ ಅವರನ್ನ ಸಿಐಡಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಏರ್ಪೋರ್ಟ್ನಲ್ಲಿ ಸಿಐಡಿ ಅಧಿಕಾರಿಗಳಿಗೆ ಒಳಗೆ ಪ್ರವೇಶ ಇಲ್ಲದ ಕಾರಣ ಏರ್ಪೋರ್ಟ್ ಒಳಭಾಗಕ್ಕೆ ದೇವನಹಳ್ಳಿ ಎಸಿಪಿ ಹರ್ಷ ಅವರು ಶಾಸಕ ಬೈರತಿ ಬಸವರಾಜ್ ಅವರನ್ನ ವಶಕ್ಕೆ ಪಡೆದಿದ್ದಾರೆ.






Be the first to comment
Leave a Reply