ಬಾಲಕಿ ಜೊತೆ ಅನುಚಿತ ವರ್ತನೆ.. ಮುತ್ಯಾ ವಿರುದ್ಧ ಪೋಕ್ಸೋ ಕೇಸ್; ಯಾವುದೇ ಕ್ಷಣದಲ್ಲಿ ಅರೆಸ್ಟ್‌?

ಬಾಲಕಿ ಜೊತೆ ಅನುಚಿತ ವರ್ತನೆ.. ಮುತ್ಯಾ ವಿರುದ್ಧ ಪೋಕ್ಸೋ ಕೇಸ್; ಯಾವುದೇ ಕ್ಷಣದಲ್ಲಿ ಅರೆಸ್ಟ್‌?

ಬೆಂಗಳೂರು/ಯಾದಗಿರಿ: ಅಪ್ರಾಪ್ತೆಯ ಜೊತೆ ಸ್ವಯಂ ಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾ (Mallikarjuna Mutya) ಅನುಚಿತ ವರ್ತನೆ ತೋರಿದ್ದಾರೆ ಎಂಬ ಗಂಭೀರ ಆರೋಪ ಕೇಳಿ ಬಂದಿದೆ. ಈ ಸಂಬಂಧ ಎಫ್‌ಐಆರ್‌ ದಾಖಲಾಗಿದೆ. ಶಹಾಪುರ ತಾಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ನೀಡಿದ ದೂರಿನ ಮೇರೆಗೆ ಶಹಾಪುರ ತಾಲ್ಲೂಕಿನ ಗೋಗಿ ಪೊಲೀಸ್ ಠಾಣೆಯಲ್ಲಿ‌ ಪೋಕ್ಸೋ ಪ್ರಕರಣ ದಾಖಲಾಗಿದೆ. ಹೀಗಾಗಿ ಮಲ್ಲಿಕಾರ್ಜುನ ಮುತ್ಯಾ ಯಾವುದೇ ಕ್ಷಣದಲ್ಲೂ ಅರೆಸ್ಟ್‌ ಆಗುವ ಸಾಧ್ಯತೆಗಳಿವೆ.

ಏನಿದು ಪ್ರಕರಣ?
ಸ್ವಯಂ ಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾ ತೊಡೆ ಮೇಲೆ ಬಾಲಕಿ ಕೂರಿಸಿಕೊಂಡು ಅನುಚಿತ ವರ್ತನೆ ತೋರಿದ್ದಾರೆ ಎಂಬ ಆರೋಪ ಬಂದಿತ್ತು. ಮುತ್ಯಾನ ತೊಡೆಯ ಮೇಲೆ ಬಾಲಕಿ ಕುಳಿತುಕೊಂಡಿರುವ ವಿಡಿಯೋ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿತ್ತು. ಈ ಬೆನ್ನಲ್ಲೇ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಅಧ್ಯಕ್ಷ ಶಶಿಧರ ಕೋಸಂಬೆ, ಕ್ರಮ ತೆಗೆದುಕೊಳ್ಳುವಂತೆ ಯಾದಗಿರಿ ಎಸ್ಪಿಗೆ ಪತ್ರ ಬರೆದಿದ್ದರು.

Be the first to comment

Leave a Reply

Your email address will not be published. Required fields are marked *

ad image