
ರಾಯಚೂರು: ರಾಜನಹಳ್ಳಿ ಶ್ರೀ ಮಹರ್ಷಿ ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದ ಪುರಿ ಸ್ವಾಮೀಜಿ ಅವರಿಗೆ ಲಘು ಹೃದಯಾಘಾತ ಸಂಭವಿಸಿದೆ. ಕಾರ್ಯಕ್ರಮವೊಂದರ ನಿಮಿತ್ತ ರಾಯಚೂರು ಜಿಲ್ಲೆಗೆ ಆಗಮಿಸಿದ್ದ ವೇಳೆ ಸ್ವಾಮೀಜಿಗಳ ಆರೋಗ್ಯದಲ್ಲಿ ಏರುಪೇರಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಹೈದರಾಬಾದ್ ಆಸ್ಪತ್ರೆಗೆ ರವಾನಿಸಲಾಗಿದೆ. ಸ್ವಾಮೀಜಿ ಅವರು ಕಾರ್ಯಕ್ರಮದ ನಿಮಿತ್ತ ರಾಯಚೂರು ಜಿಲ್ಲೆಯ ಲಿಂಗಸಗೂರಿನ ಹಟ್ಟಿ ಪಟ್ಟಣದಲ್ಲಿ ವಾಸ್ತವ್ಯ ಹೂಡಿದ್ದರು. ನಿನ್ನೆ ರಾತ್ರಿ ಅವರ ಆರೋಗ್ಯದಲ್ಲಿ ಏಕಾಏಕಿ ಸಮಸ್ಯೆ ಕಾಣಿಸಿಕೊಂಡಿದೆ. ತಕ್ಷಣವೇ ಎಚ್ಚೆತ್ತ ಸಿಬ್ಬಂದಿ ಮತ್ತು ಶಿಷ್ಯರು ಅವರನ್ನು ರಾಯಚೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿದ್ದಾರೆ.
ರಾಯಚೂರಿನಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿದ ಬಳಿಕ, ವೈದ್ಯರ ಸಲಹೆಯ ಮೇರೆಗೆ ಹೆಚ್ಚಿನ ಚಿಕಿತ್ಸೆಗಾಗಿ ಶ್ರೀಗಳನ್ನು ಹೈದರಾಬಾದ್ನ ಅಪೋಲೋ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಸದ್ಯ ಲಭ್ಯವಾಗಿರುವ ಮಾಹಿತಿಯ ಪ್ರಕಾರ, ಸ್ವಾಮೀಜಿ ಅವರಿಗೆ ಲಘು ಹೃದಯಾಘಾತವಾಗಿದ್ದು, ಸೂಕ್ತ ಸಮಯದಲ್ಲಿ ಚಿಕಿತ್ಸೆ ಲಭಿಸಿದೆ. ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬರುತ್ತಿದೆ ಎಂದು ಮಠದ ಮೂಲಗಳು ತಿಳಿಸಿವೆ. ಹೀಗಾಗಿ ಭಕ್ತರು ಆತಂಕಪಡುವ ಅಗತ್ಯವಿಲ್ಲ ಎಂದು ಹೇಳಲಾಗಿದೆ.






Be the first to comment
Leave a Reply