
ಬೆಂಗಳೂರು: ರಾಜ್ಯದಲ್ಲಿ ಪಿಯುಸಿ ಪರೀಕ್ಷೆ (PUC Exams) ನಡೆಯುತ್ತಿರುವ ಬೆನ್ನಲ್ಲೇ ಇಬ್ಬರು ಪಿಯು ವಿದ್ಯಾರ್ಥಿನಿಯರು ನಾಪತ್ತೆಯಾಗಿರುವ ಘಟನೆ ಆತಂಕಕ್ಕೆ ಕಾರಣವಾಗಿದೆ. ವಿದ್ಯಾರಣ್ಯಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಜನವರಿ 31ರಂದು 2ನೇ ಪಿಯು ಓದುತ್ತಿದ್ದ ತನಿಷ್ಕಾ ಹಾಗೂ 1ನೇ ಪಿಯು ವಿದ್ಯಾರ್ಥಿನಿ ತೇಜಸ್ವಿನಿ ಕಾಣೆಯಾಗಿದ್ದು, ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಈ ಹಿಂದೆಯೂ ಪರೀಕ್ಷೆ ವೇಳೆ ಕೈ ಕತ್ತರಿಸಿಕೊಂಡಿದ್ದ ವಿದ್ಯಾರ್ಥಿನಿ
ಪರೀಕ್ಷೆ ಸಮೀಪಿಸುತ್ತಿದ್ದ ಹಿನ್ನೆಲೆ ಎಕ್ಸಾಮ್ ಭಯದಿಂದ ಸೀನಿಯರ್ ವಿದ್ಯಾರ್ಥಿನಿ ತನ್ನ ಜೂನಿಯರ್ ಸ್ನೇಹಿತೆಯನ್ನು ಕರೆದುಕೊಂಡು ಮನೆ ಬಿಟ್ಟು ತೆರಳಿರುವ ಶಂಕೆ ವ್ಯಕ್ತವಾಗಿದೆ. ಕಳೆದ ವರ್ಷ ಪರೀಕ್ಷೆ ತಪ್ಪಿಸಿಕೊಳ್ಳಲು ತನಿಷ್ಕಾ ತನ್ನ ಕೈ ಕತ್ತರಿಸಿಕೊಂಡಿದ್ದಳೆಂದು ತಿಳಿದುಬಂದಿದೆ. ಹೀಗಾಗಿ ಈ ಬಾರಿ ಎಕ್ಸಾಮ್ ಬರೆಯಲು ಇಚ್ಚಿಸದೆ ಈ ನಿರ್ಧಾರ ಕೈಗೊಂಡಿರಬಹುದೆಂದು ಕುಟುಂಬಸ್ಥರು ಮತ್ತು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಕಾಣೆಯಾಗಿರುವ ಈ ಇಬ್ಬರು ವಿದ್ಯಾರ್ಥಿನಿಯರು ತಮ್ಮ ಮೊಬೈಲ್ ಫೋನ್‌ಗಳನ್ನು ಮನೆಯಲ್ಲೇ ಬಿಟ್ಟು ಹೋಗಿದ್ದು, ಎಟಿಎಂ ಕಾರ್ಡ್ ಸೇರಿದಂತೆ ಯಾವುದೇ ಹಣಕಾಸು ಕೊಂಡೊಯ್ದಿಲ್ಲವೆಂದು ಹೇಳಲಾಗಿದೆ. ಆಧಾರ್ ಕಾರ್ಡ್ ಹಾಗೂ ಕಾಲೇಜು ಬ್ಯಾಗ್ ಮಾತ್ರ ತೆಗೆದುಕೊಂಡು ನಾಪತ್ತೆಯಾಗಿರುವ ಇವರು, ಉಚಿತ ಬಸ್ ಪ್ರಯಾಣ ಸೌಲಭ್ಯ ಬಳಸಿಕೊಂಡಿರುವ ಶಂಕೆಯೂ ವ್ಯಕ್ತವಾಗಿದೆ.






Be the first to comment
Leave a Reply