ಯುದ್ಧದ ಪರಿಸ್ಥಿತಿಯಿಂದಾಗಿ ಮಧ್ಯಪ್ರಾಚ್ಯ ದೇಶಗಳಲ್ಲಿನ ಉದ್ವಿಗ್ನ ಪರಿಸ್ಥಿತಿ ಹಿನ್ನೆಲೆಯಲ್ಲಿ ದುಬೈ, ಅಬುಧಾಬಿ, ರಿಯಾದ್, ಜೆಡ್ಡಾ, ದೋಹಾ ಸೇರಿದಂತೆ ಮತ್ತಿತರ ನಗರಗಳ ವಾಯು ಪ್ರದೇಶಗಳನ್ನು ನಿರ್ಬಂಧಿಸಿದ ಕಾರಣದಿಂದಾಗಿ ಶನಿವಾರದಿಂದ ವಿಮಾನ ಸೇವೆ ಸ್ಥಗಿತಗೊಳಿಸಲಾಗಿತ್ತು.

ಬೆಂಗಳೂರು, ಮಾ.3: ಇಸ್ರೇಲ್-ಇರಾನ್ ಯುದ್ಧದಿಂದಾಗಿ ರದ್ದುಗೊಂಡಿದ್ದ ವಿಮಾನಯಾನ ಸೇವೆ ಸೋಮವಾರ ಪುನರಾರಂಭವಾಗಿದ್ದು, ದುಬೈ ವಿಮಾನ ನಿಲ್ದಾಣದಲ್ಲಿ ಹಲವು ದಿನಗಳಿಂದ ಸಿಲುಕಿಕೊಂಡಿದ್ದ ಭಾರತದ ಸ್ಟಾರ್ ಶಟ್ಲರ್ ಪಿ.ವಿ ಸಿಂಧು ಮಂಗಳವಾರ ಭಾರತಕ್ಕೆ ಮರಳಿದ್ದಾರೆ. ಬೆಂಗಳೂರಿಗೆ ಮರಳಿದ ಅವರು ಈ ವಿಚಾರವನ್ನು ತಮ್ಮ ಟ್ವಿಟರ್ ಎಕ್ಸ್ನಲ್ಲಿ ಹಂಚಿಕೊಂಡಿದ್ದಾರೆ. ಸುರಕ್ಷಿತವಾಗಿ ಮನೆಗೆ ತಲುಪಿದೆ ಎಂದು ಪೋಸ್ಟ್ ಮಾಡಿದ್ದಾರೆ. ಆಲ್ ಇಂಗ್ಲೆಂಡ್ ಚಾಂಪಿಯನ್ಶಿಪ್ನಲ್ಲಿ ಭಾಗವಹಿಸಲು ತೆರಳುತ್ತಿದ್ದ ಸಿಂಧು, ಫೆಬ್ರವರಿ 28 ರ ಶನಿವಾರದಿಂದ ದುಬೈನಲ್ಲಿ ಸಿಲುಕಿಕೊಂಡಿದ್ದರು.
“ಬೆಂಗಳೂರಿನಲ್ಲಿರುವ ಮನೆಗೆ ಸುರಕ್ಷಿತವಾಗಿ ಹಿಂತಿರುಗಿದ್ದೇನೆ. ಕಳೆದ ಕೆಲವು ದಿನಗಳು ತೀವ್ರ ಅನಿಶ್ಚಿತತೆಯಿಂದ ಕೂಡಿದ್ದವು, ಆದರೆ ನನ್ನ ಮನೆಗೆ ಹಿಂತಿರುಗಿದ್ದಕ್ಕೆ ನಾನು ನಿಜವಾಗಿಯೂ ಕೃತಜ್ಞನಾಗಿದ್ದೇನೆ. ಬಹಳ ಕಷ್ಟದ ಸಮಯದಲ್ಲಿ ನಮ್ಮನ್ನು ಚೆನ್ನಾಗಿ ನೋಡಿಕೊಂಡ ಪ್ರತಿಯೊಬ್ಬ ವ್ಯಕ್ತಿಗೂ ಹೃತ್ಪೂರ್ವಕ ಧನ್ಯವಾದಗಳು. ಸಹಾನುಭೂತಿ ಮತ್ತು ವೃತ್ತಿಪರತೆ ಪದಗಳಲ್ಲಿ ಹೇಳಲಾಗದಷ್ಟು ದೊಡ್ಡದಾಗಿದೆ” ಎಂದು ಸಿಂಧು ಟ್ವೀಟ್ ಮಾಡಿದ್ದಾರೆ.
ಯುದ್ಧದ ಪರಿಸ್ಥಿತಿಯಿಂದಾಗಿ ಮಧ್ಯಪ್ರಾಚ್ಯ ದೇಶಗಳಲ್ಲಿನ ಉದ್ವಿಗ್ನ ಪರಿಸ್ಥಿತಿ ಹಿನ್ನೆಲೆಯಲ್ಲಿ ದುಬೈ, ಅಬುಧಾಬಿ, ರಿಯಾದ್, ಜೆಡ್ಡಾ, ದೋಹಾ ಮತ್ತಿತರ ನಗರಗಳ ವಾಯು ಪ್ರದೇಶಗಳನ್ನು ನಿರ್ಬಂಧಿಸಿದ ಕಾರಣದಿಂದಾಗಿ ಶನಿವಾರದಿಂದ ವಿಮಾನ ಸೇವೆ ಸ್ಥಗಿತಗೊಳಿಸಲಾಗಿತ್ತು.






Be the first to comment
Leave a Reply