ಇಸ್ರೇಲ್ ಮತ್ತು ಇರಾನ್ ನಡುವಿನ ಸಂಘರ್ಷದ ಪರಿಣಾಮ ಈಗ ಜಾಗತಿಕ ಮಾರುಕಟ್ಟೆಯಲ್ಲಿ ಕಾಣಿಸತೊಡಗಿದೆ. ಬುಧವಾರದ ಆರಂಭಿಕ ವಹಿವಾಟಿನಲ್ಲಿ ರೂಪಾಯಿ ಮೌಲ್ಯವು ಡಾಲರ್ ಎದುರು ಕುಸಿದಿದ್ದು, ಸಾರ್ವಕಾಲಿಕ ಕನಿಷ್ಠ ಮಟ್ಟವನ್ನು ತಲುಪಿದೆ. ಈ ಹಿಂದೆ ಜನವರಿ ಅಂತ್ಯದಲ್ಲಿ ರೂಪಾಯಿ ಮೌಲ್ಯ ಕುಸಿತವಾಗಿತ್ತು. ಅದರ ಬಳಿಕ ಈಗ ಮತ್ತೆ ಕುಸಿತಗೊಂಡಿದೆ.

ಆರಂಭಿಕ ವಹಿವಾಟಿನಲ್ಲೇ ರೂಪಾಯಿ ಮೌಲ್ಯ ಬುಧವಾರ ಸಾರ್ವಕಾಲಿಕ ಕನಿಷ್ಠ ಮಟ್ಟಕ್ಕೆ ಕುಸಿತಗೊಂಡಿದೆ. ಇರಾನ್ ವಿರುದ್ಧ ಇಸ್ರೇಲ್ ಮತ್ತು ಯುಎಸ್ ಸೇನಾ ಪಡೆಯು ನಡೆಸುತ್ತಿರುವ ಪರಿಣಾಮ ಈಗ ಜಾಗತಿಕ ಮಾರುಕಟ್ಟೆಯಲ್ಲಿ ಗೋಚರವಾಗತೊಡಗಿದೆ. ಡಾಲರ್ ಎದುರು ರೂಪಾಯಿ ಮೌಲ್ಯವು ಬುಧವಾರ ಸಾರ್ವಕಾಲಿಕ ಕನಿಷ್ಠ ಮಟ್ಟ 92.17ಕ್ಕೆ ತಲುಪಿದ್ದು, ಆರಂಭಿಕ ವಹಿವಾಟಿನಲ್ಲಿ 68 ಪೈಸೆ ಕುಸಿತಗೊಂಡಿತ್ತು. ಈ ಹಿಂದೆ ಜನವರಿ ಅಂತ್ಯದಲ್ಲಿ ರೂಪಾಯಿ ಮೌಲ್ಯ ಡಾಲರ್ ಎದುರು 91.9875 ಗೆ ಕುಸಿತವಾಗಿತ್ತು. ಇದು ಈ ಹಿಂದಿನ ಕನಿಷ್ಠ ಮಟ್ಟವಾಗಿದೆ.
ಭಾರತವು ತನ್ನ ಕಚ್ಚಾ ತೈಲದ ಅಗತ್ಯಗಳಲ್ಲಿ ಶೇ. 80ಕ್ಕಿಂತ ಹೆಚ್ಚು ಆಮದು ಮಾಡಿಕೊಳ್ಳುತ್ತದೆ. ಸಂಘರ್ಷದ ಪರಿಣಾಮ ಆಮದು ಖರ್ಚು ಹೆಚ್ಚಾಗುವ ಸಾಧ್ಯತೆ ಇದ್ದು, ಇದರಿಂದ ಹಣಕಾಸಿನ ಕೊರತೆಯೊಂದಿಗೆ ಹಣದುಬ್ಬರ ಕೂಡ ಉಂಟಾಗುವ ಸಾಧ್ಯತೆ ಇದೆ. ಹೀಗಾಗಿ ತೈಲ ಬೆಲೆಯು ರೂಪಾಯಿ ಮೌಲ್ಯದ ಮೇಲೆ ಹೆಚ್ಚಿನ ಪರಿಣಾಮ ಬೀರುವ ಸಾಧ್ಯತೆ ಇದೆ.
ಈ ಸಂದರ್ಭದಲ್ಲಿ ಮಾರುಕಟ್ಟೆ ಅಪಾಯವನ್ನು ಎದುರಿಸಲು ಭಾರತೀಯ ಷೇರುದಾರರು ವಿದೇಶಿ ಬಂಡವಾಳದ ಮೇಲೆ ಹೂಡಿಕೆ ಮಾಡಲು ಪ್ರೇರೇಪಿಸುತ್ತದೆ. ಆದರೆ ಮಧ್ಯಪ್ರಾಚ್ಯದಲ್ಲಿನ ಆರ್ಥಿಕ ಚಟುವಟಿಕೆಗಳ ಪರಿಣಾಮ ಭಾರತದಲ್ಲಿ ಹೂಡಿಕೆ ಕಡಿಮೆಯಾಗುವ ಸಾಧ್ಯತೆ ಇದೆ.
ದೀರ್ಘಕಾಲದ ಸಂಘರ್ಷವು ಮಧ್ಯಪ್ರಾಚ್ಯದಿಂದ ಹಣ ರವಾನೆ ಮತ್ತು ಬಂಡವಾಳ ಹರಿವುಗಳ ಮೇಲೆ ಪರಿಣಾಮ ಬೀರುವ ಸಾಧ್ಯತೆಯಿದೆ. ದೀರ್ಘಕಾಲದ ಹಣಕಾಸಿನ ಕೊರತೆಯು ಹಣದುಬ್ಬರ ಹೆಚ್ಚಿಸುತ್ತದೆ, ರೂಪಾಯಿ ಅಪಮೌಲ್ಯೀಕರಣಕ್ಕೆ ಕಾರಣವಾಗುತ್ತದೆ ಮತ್ತು ಕಡಿಮೆ ಜಿಡಿಪಿ ಬೆಳವಣಿಗೆಯ ಮೂಲಕ ಭಾರತದ ಆರ್ಥಿಕತೇ ದುರ್ಬಲಗೊಳ್ಳುವ ಸಾಧ್ಯತೆ ಇದೆ ಎಂದು ಕೋಟಕ್ ಮಹೀಂದ್ರಾ ಬ್ಯಾಂಕಿನ ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ.






Be the first to comment
Leave a Reply