ಬೆಂಗಳೂರು: ಕರ್ನಾಟಕ ಕಾಂಗ್ರೆಸ್ ಪಕ್ಷದ ನಾಯಕತ್ವದ ಬಿಕ್ಕಟ್ಟು ಈಗ ಕ್ಲೈಮಾಕ್ಸ್ (Climax) ಹಂತಕ್ಕೆ ಬಂದು ನಿಂತಿದೆ ಎಂದು ಹೇಳಲಾಗ್ತಿದೆ. ಸಿಎಂ ಸಿದ್ದರಾಮಯ್ಯ (CM Siddaramaiah) ಮತ್ತು ಡಿಸಿಎಂ ಡಿ.ಕೆ. ಶಿವಕುಮಾರ್ (DCM D.K Shivakumar) ನಡುವಿನ ಪವರ್ ಶೇರಿಂಗ್ (Power Sharing) ಗೊಂದಲ ದಿನದಿಂದ ದಿನಕ್ಕೆ ತೀವ್ರವಾಗುತ್ತಿದ್ದು, ಪಕ್ಷದ ಉನ್ನತ ನಾಯಕರು ಇದನ್ನು ಬಗೆಹರಿಸುವ ಪ್ರಯತ್ನದಲ್ಲಿದ್ದಾರೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ (Mallikarjun Kharge) ಅವರು ಇದೀಗ ಸಚಿವ ಸತೀಶ್ ಜಾರಕಿಹೊಳಿಗೆ ಭರವಸೆ ನೀಡಿರುವುದಾಗಿ ಹೇಳಲಾಗಿದೆ.

ರಾಜ್ಯದಲ್ಲಿ ನಾಯಕತ್ವ ಬಿಕ್ಕಟ್ಟಿನಿಂದ ಪಕ್ಷಕ್ಕೆ ಡ್ಯಾಮೇಜ್ ಆಗಿರುವ ಬಗ್ಗೆ ಪ್ರಸ್ತಾಪವಾಗಿದ್ದು, ಈ ವೇಳೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಶೀಘ್ರವೇ ಗೊಂದಲ ಬಗೆಹರಿಸುವ ಭರವಸೆ ನೀಡಿದ್ದಾರೆ. ಈ ಬಗ್ಗೆ ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಮಾತು ಕೊಟ್ಟಿರುವುದಾಗಿ ತಿಳಿದುಬಂದಿದೆ. ಸಚಿವ ಸತೀಶ್ ಜಾರಕಿಹೊಳಿ ಹೈಕಮಾಂಡ್ ನಾಯಕರನ್ನು ಮತ್ತು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆಯನ್ನು ಭೇಟಿ ಮಾಡಿ ನಾಯಕತ್ವದ ಬಿಕ್ಕಟ್ಟಿನ ಬಗ್ಗೆ ಪ್ರಸ್ತಾಪ ಮಾಡಿದ್ದಾರೆ. ಅಲ್ಲದೇ ಈ ನಾಯಕತ್ವದ ಗೊಂದಲದ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸತೀಶ್ ಜಾರಕಿಹೊಳಿ ‘ಆದಷ್ಟು ಬೇಗ ಒಂದು ನಿರ್ಣಯ ಮಾಡಿ. ಇದರಿಂದ ಪಕ್ಷಕ್ಕೆ ಡ್ಯಾಮೇಜ್ ಆಗುತ್ತಿದೆ. ಮುಂದಿನ ಚುನಾವಣೆಯಲ್ಲಿ ಪರಿಣಾಮ ಬೀರಲಿದೆ’ ಎಂದು ಹೇಳಿದ್ದಾರೆ ಎಂದು ತಿಳಿದುಬಂದಿದೆ. ಈ ಸಂದರ್ಭದಲ್ಲಿ ಇದಕ್ಕೆ ಪ್ರತಿಕ್ರಿಯಿಸಿದ ಮಲ್ಲಿಕಾರ್ಜುನ್ ಖರ್ಗೆ ಸತೀಶ್ ಜಾರಕಿಹೊಳಿಗೆ ಭರವಸೆ ನೀಡಿದ್ದಾರೆ. ಈಗಾಗಲೇ ಹೈಕಮಾಂಡ್ ತೀರ್ಮಾನಕ್ಕೆ ಬಂದಿದೆ. ಬಹುತೇಕ ಬರುವ ವಾರದಲ್ಲೇ ಇತ್ಯರ್ಥ ಮಾಡುತ್ತೇವೆ ಎಂದು ಹೇಳಿದ್ದಾರೆ. ಡಿ.ಕೆ. ಶಿವಕುಮಾರ್ ಮುಂದಿನ 23ರ ನಂತರ ರಾಜಕೀಯ ಮಾತಾಡುತ್ತೇನೆ ಎಂದು ಹೇಳಿದ್ದಾರೆ. ಅಲ್ಲಿಯವರೆಗೂ ಯಾರೂ ಏನು ಮಾತಾಡದಂತೆ ತಾಕೀತು ಮಾಡಿದ್ದಾರೆ. ತಮ್ಮ ಆಪ್ತ ಶಾಸಕರಿಗೆ ಬಾಯಿ ಮುಚ್ಚಿಸುವಂತೆ ಸೂಚನೆ ನೀಡಿದ್ದಾರೆ. ಇದೆಲ್ಲದರ ನಡುವೆ ಸಿಎಂ ಸಿದ್ದರಾಮಯ್ಯ ಅವರು ಸಮುದಾಯದ ಪ್ಲೇ ಕಾರ್ಡ್ ಬಳಸಿದ್ದಾರೆ ಎಂಬ ಆರೋಪ ಕೇಳಿ ಬರುತ್ತಿದೆ. ಇದು ಕುತೂಹಲಕ್ಕೆ ಎಡೆಮಾಡಿಕೊಟ್ಟಿದೆ. ಕಾಂಗ್ರೆಸ್ ಪಕ್ಷದಲ್ಲಿ ಕೊನೆಯ ಹಂತದ ಬೆಳವಣಿಗೆಗಳು ನಡೆಯುತ್ತಿವೆ ಎಂದು ಮೂಲಗಳು ತಿಳಿಸಿವೆ.






Be the first to comment
Leave a Reply