‘ಕುರಿ ಕಾಯುತ್ತಿದ್ದವನು ಸಿಎಂ ಆದ..’ ‘ಪಟ್ಟಭದ್ರ’ರ ವಿರುದ್ಧ ಸಿದ್ದರಾಮಯ್ಯ ಮಾರ್ಮಿಕ ಪೋಸ್ಟ್​​!

ಬೆಂಗಳೂರು: ನಾಯಕತ್ವ ಬದಲಾವಣೆ ಹಾಗೂ ಸಿಎಂ ಕುರ್ಚಿ ಕಚ್ಚಾಟದ ನಡುವೆ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರು ಸಾಲು ಸಾಲು ಮಾರ್ಮಿಕ ಪೋಸ್ಟ್​ ಮಾಡಿದ್ದು, ಭಾರೀ ಚರ್ಚೆಗೆ ಕಾರಣವಾಗಿದೆ. ಕುರಿ ಕಾಯುತ್ತಿದ್ದವನು ಸಿಎಂ ಆದದ್ದೇ ಪಟ್ಟಭದ್ರರ ಕಣ್ಣು ಕೆಂಪಾಗಲು ಕಾರಣ. ಸಾಮಾಜಿಕ ನ್ಯಾಯಕ್ಕಾಗಿ ನನ್ನ ಉಸಿರುವವರೆಗೂ ಹೋರಾಡುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಸಂದೇಶ ನೀಡಿದ್ದಾರೆ.
'ಕುರಿ ಕಾಯುತ್ತಿದ್ದವನು ಸಿಎಂ ಆದ..' 'ಪಟ್ಟಭದ್ರ'ರ ವಿರುದ್ಧ ಸಿದ್ದರಾಮಯ್ಯ ಮಾರ್ಮಿಕ ಪೋಸ್ಟ್​​!
ಸಿಎಂ ಸಿದ್ದರಾಮಯ್ಯ ಟ್ವೀಟ್​​​,  ಸಾಮಾಜಿಕ ನ್ಯಾಯಕ್ಕಾಗಿ ನನ್ನ ಉಸಿರಿರುವವರೆಗೆ ಹೋರಾಡುತ್ತೇನೆ. ನನ್ನ ನಾಲ್ಕು ದಶಕಗಳ ರಾಜಕೀಯ ಜೀವನ ಎಂದಿಗೂ ಹೂವಿನ ಹಾಸಿಗೆ ಆಗಿರಲಿಲ್ಲ, ಅದು ಕಲ್ಲು – ಮುಳ್ಳುಗಳ ಹಾದಿಯಾಗಿತ್ತು. ನನ್ನನ್ನು ರಾಜಕೀಯವಾಗಿ ಮುಗಿಸಲು ಹಲವಾರು ದೊಡ್ಡ ದೊಡ್ಡ ನಾಯಕರು ಹಲವಾರು ಬಗೆಯ ಕುಟಿಲ ಕಾರಸ್ತಾನಗಳನ್ನು ಮಾಡಿದ್ದಾರೆ. ಅವುಗಳನ್ನೆಲ್ಲವನ್ನೂ ಜನತೆಯ ಆಶೀರ್ವಾದದಿಂದ ಗೆದ್ದು ಬಂದಿದ್ದೇನೆ ಎಂದು ಪೋಸ್ಟ್​ನಲ್ಲಿ ಬರೆಯಲಾಗಿದೆ. ಇದು ನನ್ನ ವಿರುದ್ಧ ನಡೆಯುತ್ತಿರುವ ಷಡ್ಯಂತ್ರಗಳಲ್ಲ, ಇದು ನನ್ನನ್ನು ನಂಬಿರುವ, ಪ್ರೀತಿಸುತ್ತಿರುವ, ನನಗೆ ನಿರಂತರವಾಗಿ ಆಶೀರ್ವಾದ ನೀಡಿ ಬೆಂಬಲಿಸುತ್ತಿರುವ ನಿಮ್ಮ ವಿರುದ್ಧ ನಡೆಯುತ್ತಿರುವ ಷಡ್ಯಂತ್ರ ಎನ್ನುವುದು ನನಗೆ ಚೆನ್ನಾಗಿ ಗೊತ್ತು. ಆದ್ದರಿಂದ ನನ್ನ ಉಸಿರು ಇರುವ ವರೆಗೆ ಈ ರಾಜಕೀಯ ಷಡ್ಯಂತ್ರ, ದ್ವೇಷ-ಅಸೂಯೆಯ ರಾಜಕಾರಣದ ವಿರುದ್ಧ ಹೋರಾಡುತ್ತೇನೆ. ಇದು ಸತ್ಯ, ನ್ಯಾಯ ಮತ್ತು ಧರ್ಮಕ್ಕಾಗಿ ನಡೆಯುತ್ತಿರುವ ಹೋರಾಟ. ನಿಮ್ಮೆಲ್ಲರ ಬೆಂಬಲದೊಂದಿಗೆ ಈ ಹೋರಾಟವನ್ನು ನನ್ನ ಉಸಿರು ಇರುವ ವರೆಗೆ ನಡೆಸುತ್ತೇನೆ, ರಣರಂಗವನ್ನು ಬಿಟ್ಟು ಓಡಿ ಹೋಗುವ ಹೇಡಿ ನಾನಾಗಲಾರೆ ಎಂದು ಸಿಎಂ ಬರೆದಿದ್ದಾರೆ. ನನ್ನ ಮೇಲೆ ವಿರೋಧಿಗಳು ನಡೆಸುತ್ತಿರುವ ಬಹುತೇಕ ದಾಳಿಗಳು, ಮಾಡುತ್ತಿರುವ ಟೀಕೆ-ಆರೋಪಗಳಿಗೆ ನಾನು ಹುಟ್ಟಿದ ಜಾತಿಯೂ ಒಂದು ಕಾರಣ.

Be the first to comment

Leave a Reply

Your email address will not be published. Required fields are marked *

ad image